• February 9, 2026
  • Last Update February 2, 2026 6:06 pm
  • Brahmavara

ಅಗಸ್ಟ್ 24ರಂದು ಬ್ರಹ್ಮಾವರದಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ

ಅಗಸ್ಟ್ 24ರಂದು ಬ್ರಹ್ಮಾವರದಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ

ಉಡುಪಿಮಿತ್ರ ಪತ್ರಿಕೆ ಸುದ್ದಿ :
ಬ್ರಹ್ಮಾವರ, ಆ. 20: ಬ್ರಹ್ಮಾವರ ಫೌಂಡೇಶನ್ (ರಿ.), ಲಯನ್ಸ್ & ಲಿಯೋ ಕ್ಲಬ್ ಬ್ರಹ್ಮಾವರ-ಬಾರ್ಕೂರು, ಬ್ರಹ್ಮಾವರ ಅಭಿವೃದ್ಧಿ ಸಮಿತಿ (ರಿ..) ಇವರ ಸಹಭಾಗಿತ್ವದಲ್ಲಿ ನೇತ್ರಜ್ಯೋತಿ ಚಾರಿಟೇಬಲ್ ಟ್ರಸ್ಟ್ ಉಡುಪಿ, ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ, ಉಡುಪಿ ಇವರ ಸಹಯೋಗದೊಂದಿಗೆ ದಿನಾಂಕ : 24.08.2025ನೇ ಅದಿತ್ಯವಾರದಂದು ಬೆಳಿಗ್ಗೆ 9.೦೦ ರಿಂದ ಸಂಜೆ 4.3೦ ರವರೆಗೆ ಬ್ರಹ್ಮಾವರ ಎಸ್.ಎಂ.ಎಸ್. ಸಮುದಾಯ ಭವನದಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ ನಡೆಯಲಿದೆ ಎಂದು ಬ್ರಹ್ಮಾವರ ಪೌಂಡೇಶನ್ ರಿ. ಅಧ್ಯಕ್ಷ ಗೋವಿಂದರಾಜ್ ಹೆಗ್ಡೆ ತಿಳಿಸಿದರು. ಅವರು ಅ.20 ರಂದು ಬ್ರಹ್ಮಾವರದ ಆಶ್ರಯ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಟಿಯಲ್ಲಿ ಮಾಹಿತಿ ನೀಡಿದರು.
ಕಾರ್ಯಕ್ರಮದ ಉದ್ಘಾಟಕರಾಗಿ ಬ್ರಹ್ಮಾವರ ಲಿಟ್ಲರಾಕ್ ಇಂಡಿಯನ್ ಸ್ಕೂಲ್‌ನ ನಿರ್ದೇಶಕ ಮ್ಯಾಥ್ಯ್ಯೂ ಸಿ.ನೈನಾನ್, ಅಧ್ಯಕ್ಷತೆಯನ್ನು ಪ್ರಸಾದ್ ನೇತ್ರಾಲಯದ ವೈದ್ಯಕೀಯ ನಿರ್ದೇಶಕ ಡಾ |ಕೃಷ್ಣಪ್ರಸಾದ್, ಮುಖ್ಯ ಅತಿಥಿಯಾಗಿ ಬ್ರಹ್ಮಾವರ ಸಮುದಾಯ ಆರೊಗ್ಯ ಕೇಂದ್ರ ಡಾ | ಅಜಿತ್ ಕುಮಾರ್ ಶೆಟ್ಟಿ ಭಾಗವಹಿಸಲಿದ್ದಾರೆ. ಶಿಬಿರದಲ್ಲಿ ಕಣ್ಣಿನ ತಪಾಸಣೆ ನಡೆಸಲಾಗುವುದು. ಅಗತ್ಯ ಉಳ್ಳವರಿಗೆ ಉಚಿತವಾಗಿ ಕನ್ನಡಕವನ್ನು ಒದಗಿಸಲಾಗುವುದು ಹಾಗೂ ಉಚಿತ ಕಣ್ಣಿನ ಪೊರೆ ಶಸ್ತ್ರ ಚಿಕಿತ್ಸೆ ನೀಡಲಾಗುವುದು. ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಗೆ ಆಯ್ಕೆಯಾದವರಿಗೆ ಗೊತ್ತುಪಡಿಸಿದ ದಿನಾಂಕದಂದು ಉಡುಪಿಯ ಪ್ರಸಾದ್ ನೇತ್ರಾಲಯ, ಕಣ್ಣಿನ ಆಸ್ಪತ್ರೆಗೆ ತಮ್ಮದೇ ಆದ ವಾಹನದಲ್ಲಿ ಕರೆದುಕೊಂಡು ಹೋಗಿ ಶಸ್ತ್ರ ಚಿಕಿತ್ಸೆ ಮಾಡಿಸಿ, ಮರುದಿನ ಕರೆದು ತಂದು ಬಿಡಲಾಗುವುದು. ಭಾಗವಹಿಸುವವರಿಗೆ ಯಾವುದೇ ವಯಸ್ಸಿನ ಮಿತಿ ಇರುವುದಿಲ್ಲ ಎಂದು ತಿಳಿಸಿದರು.
ಪತ್ರಿಕಾಗೋಷ್ಟಿಯಲ್ಲಿ ಬ್ರಹ್ಮಾವರ ಬಾರಕೂರು ಲಯನ್ಸ್ ಕ್ಲಬ್ ಅಧ್ಯಕ್ಷ ಸುದೇಶ್ ಹೆಗ್ಡೆ, ಬ್ರಹ್ಮಾವರ ಫೌಂಡೇಶನ್ ರಿ. ಸದಸ್ಯ ಅಲ್ಬರ್ಟ್ ರೋನಿ ಡಿಸೋಜ, ಬ್ರಹ್ಮಾವರ ಅಭಿವೃದ್ಧಿ ಸಮಿತಿಯ ಪ್ರತೀತ್ ಹೆಗ್ಡೆ, ಜಾಯ್ಸನ್ ವೆರೋನ್ಸಾ ಉಪಸ್ಥಿತರಿದ್ದರು.

administrator

Related Articles

Leave a Reply

Your email address will not be published. Required fields are marked *