udupimitra.in
  • July 31, 2026
  • Last Update July 31, 2026 5:20 am
  • Brahmavara

ಅ.1ರಂದು ಉಡುಪಿ ಜಿಲ್ಲಾ ಚಿನ್ನ ಬೆಳ್ಳಿ ಕೆಲಸಗಾರರ ಸಂಘದ ವಾರ್ಷಿಕ ಮಹಾಸಭೆ

ಅ.1ರಂದು ಉಡುಪಿ ಜಿಲ್ಲಾ ಚಿನ್ನ ಬೆಳ್ಳಿ ಕೆಲಸಗಾರರ ಸಂಘದ ವಾರ್ಷಿಕ ಮಹಾಸಭೆ

ಉಡುಪಿಮಿತ್ರ ಪತ್ರಿಕೆ ಸುದ್ಧಿ :
ಉಡುಪಿ, ಜು.೩೦: ಉಡುಪಿ ಜಿಲ್ಲಾ ಚಿನ್ನ ಬೆಳ್ಳಿ ಕೆಲಸಗಾರರ ಸಂಘದ ವಾರ್ಷಿಕ ಮಹಾಸಭೆ, ಪ್ರತಿಭಾ ಪುರಸ್ಕಾರ ಹಾಗೂ ರಜತ ಮಹೋತ್ಸವದ ಪೂರ್ವಭಾವಿ ಸಭೆ ಅ.೧ರಂದು ಉಡುಪಿ ಕುಂಜಿಬೆಟ್ಟು ಗಾಯತ್ರಿ ಕಲ್ಯಾಣ ಮಂಟಪದಲ್ಲಿ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ರವಿಚಂದ್ರ ಆಚಾರ್ಯ ಮಾರಾಳಿ ತಿಳಿಸಿದ್ದಾರೆ.
ಉದ್ಘಾಟಕರಾಗಿ ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕ ಯಶಪಾಲ್ ಸುವರ್ಣ ಉದ್ಘಾಟಿಸಿಲಿದ್ದಾರೆ. ಪ್ರತಿಭಾ ಪುರಸ್ಕಾರವನ್ನು ಕರ್ನಾಟಕ ರಾಜ್ಯ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮ ನಿಯಮಿತ ಅಧ್ಯಕ್ಷ ಪಿ.ಸುಜ್ಞಾನಮೂರ್ತಿ ನೆರವೇರಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಉದ್ಯಮಿ ಪ್ರಸಾದ್‌ರಾಜ್ ಕಾಂಚನ್, ಸಂಘದ ಕಾನೂನು ಸಲಹೆಗಾರ ಗಂಗಾಧರ ಎಚ್.ಎಂ., ಸಂಘದ ಗೌರವಾಧ್ಯಕ್ಷ ಬಾಲಕೃಷ್ಣ ಆಚಾರ್ಯ ಕಪ್ಪೆಟ್ಟು, ಕುಂದಾಪುರ ತಾಲೂಕು ಚಿನ್ನ ಬೆಳ್ಳಿ ಕೆಲಸಗಾರರ ಸಂಘದ ಅಧ್ಯಕ್ಷ ಬಿ.ಕುಶ ಕುಮಾರ್, ಕಾರ್ಕಳ ತಾಲೂಕು ಚಿನ್ನ ಬೆಳ್ಳಿ ಕೆಲಸಗಾರರ ಸಂಘದ ಅಧ್ಯಕ್ಷ ಎಂ.ರಮೇಶ ಆಚಾರ್ಯ, ರಾಷ್ಟ್ರೀಯ ವಿಶ್ವಬ್ರಾಹ್ಮಣ ಸಮಾಜ ಸೇವಾ ಸಂಘ (ರಿ.) ಗಾಯತ್ರಿ ಕಲ್ಯಾಣ ಮಂಟಪ ಉಡುಪಿ ಇದರ ಅಧ್ಯಕ್ಷ ಕೆ.ವಿಶ್ವನಾಥ ಆಚಾರ್ಯ ಭಾಗವಹಿಸಲಿದ್ದಾರೆ.
ಸಂಘವು ರಜತ ಸಂಭ್ರಮದಲ್ಲಿರುವುದರಿಂದ ಚಿನ್ನ ಬೆಳ್ಳಿ ಕೆಲಸಗಾರರ ರಾಜ್ಯಮಟ್ಟದ ಸಮಾವೇಶವನ್ನು ಆಯೋಜಿಸುವ ಚರ್ಚೆ ನಡೆಯಲಿದ್ದು ಎಲ್ಲಾ ಸದಸ್ಯರು ಭಾಗವಹಿಸುವಂತೆ ಕಾರ‍್ಯದರ್ಶಿ ರಘುನಾಥ ಆಚಾರ್ಯ ಹಾಗೂ ಅಧ್ಯಕ್ಷ ರವಿಚಂದ್ರ ಆಚಾರ್ಯ ಮಾರಾಳಿ ಕೋರಿಕೊಂಡಿದ್ದಾರೆ.

administrator

Related Articles

Leave a Reply

Your email address will not be published. Required fields are marked *

You cannot copy content of this page