ವರದಿ : ಚಿತ್ತೂರು ಪ್ರಭಾಕರ ಆಚಾರ್ಯ
ಉಡುಪಿಮಿತ್ರ ಪತ್ರಿಕೆ ಸುದ್ಧಿ :
ಕುಂದಾಪುರ ಮೇ೧೩: 2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಆಲೂರಿನ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ಆಲೂರಿನ ಕುಸುಮಾಕರ ಆಚಾರ್ಯ & ಸುಮಾ ಆಚಾರ್ಯ ದಂಪತಿಯ ಪುತ್ರಿ ಅನನ್ಯ ಇವರು ಒಟ್ಟು 616 ಅಂಕಗಳನ್ನು ಪಡೆದು ಶೇ. 98.56%% ಫಲಿತಾಂಶ ದಾಖಲಿಸಿದ್ದು ರಾಜ್ಯಕ್ಕೆ 10ನೇ ರ‍್ಯಾಂಕ್ ಗಳಿಸಿ ಉಡುಪಿ ಜಿಲ್ಲೆಗೆ ಪ್ರಥಮ ಸ್ಥಾನ ಗಳಿಸಿರುತ್ತಾರೆ.

ಇವರನ್ನು ಜಿಲ್ಲಾಡಳಿತದ ವತಿಯಿಂದ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಶ್ರೀ ಲಕ್ಷ್ಮೀ ಹೆಬ್ಬಾಳ್ಕರ್ ಜಿಲ್ಲಾಧಿಕಾರಿಯವರ ಕಚೇರಿಯಲ್ಲಿ ಸನ್ಮಾನಿಸಿದರು. ಈ ಸಂದರ್ಭ ವಿಧಾನ ಪರಿಷತ್ ಸದಸ್ಯರಾದ ಭೋಜೇಗೌಡ, ಮಂಜುನಾಥ ಭಂಡಾರಿ, ಜಿಲ್ಲಾಧಿಕಾರಿ ಶ್ರೀಮತಿ ಸ್ವರೂಪ ಟಿ.ಕೆ. ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.



