udupimitra.in
  • July 18, 2026
  • Last Update July 18, 2026 4:51 pm
  • Brahmavara

ಜನಸಂಪರ್ಕ ಸಭೆ ಜನರ ನೋವನ್ನು ಆಲಿಸುವ ವೇದಿಕೆ : ಶಾಸಕ ಎ.ಕಿರಣ್ ಕುಮಾರ್ ಕೊಡ್ಗಿ

ಜನಸಂಪರ್ಕ ಸಭೆ ಜನರ ನೋವನ್ನು ಆಲಿಸುವ ವೇದಿಕೆ : ಶಾಸಕ ಎ.ಕಿರಣ್ ಕುಮಾರ್ ಕೊಡ್ಗಿ

ಉಡುಪಿಮಿತ್ರ ಪತ್ರಿಕೆ ಸುದ್ಧಿ :
ಬ್ರಹ್ಮಾವರ, ಜುಲೈ ೧೬ ಸಾರ್ವಜನಿಕರ ಕೆಲಸಗಳಿಗೆ ಜನಸಂಪರ್ಕ ಸಭೆಯಲ್ಲೇ ಅಧಿಕಾರಿಗಳ ಮೂಲಕ ಪರಿಹಾರ ನೀಡಲಾಗುವುದು. ಜನಸಂಪರ್ಕ ಸಭೆ ಎನ್ನುವುದು ಕೇವಲ ಸಭೆಯಲ್ಲ. ಅದು ಜನರ ನೋವನ್ನು ಆಲಿಸುವ ಹಾಗೂ ಜನರ ಸಮಸ್ಯೆಗೆ ಪರಿಹಾರ ಸೂಚಿಸುವ ವೇದಿಕೆ. ಜನಸಂಪರ್ಕ ಸಭೆ ಎಂದರೆ ಪ್ರತಿಯೊಬ್ಬ ನಾಗರಿಕನ ಧ್ವನಿಗೆ ಬೆಲೆ ಕೊಡುವ ಪ್ರಜಾಪ್ರಭುತ್ವದ ಸಂವಾದ ಎಂದು ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಎ.ಕಿರಣ್ ಕುಮಾರ್ ಕೊಡ್ಗಿ ಹೇಳಿದರು.


ಅವರು ಯಡ್ತಾಡಿ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆದ ಜನ ಸಂಪರ್ಕ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು.

ಬ್ರಹ್ಮಾವರ ತಹಶೀಲ್ದಾರ್ ಶ್ರೀಕಾಂತ್ ಹೆಗ್ಡೆ ಪ್ರಾಸ್ತಾವಿಕ ಮಾತುಗಳನ್ನಾಡಿದರು.

ವೇದಿಕೆಯಲ್ಲಿ ಬ್ರಹ್ಮಾವರ ತಾಲ್ಲೂಕು ಕಾರ್ಯ ನಿರ್ವಹಣಾಧಿಕಾರಿ ರಾಮದಾಸ್, ಗ್ಯಾರಂಟಿ ಸಮಿತಿಯ ಡಾ. ಸುನೀತಾ ಶೆಟ್ಟಿ ಕೊಕ್ಕರ್ಣೆ, ವಡ್ಡರ್ಸೆ ಗ್ರಾಮ ಪಂಚಾಯತ್ ಆಡಳಿತಾಧಿಕಾರಿ ಸುರೇಶ್ ಬಂಗೇರ, ಯಡ್ತಾಡಿ ಗ್ರಾಮ ಪಂಚಾಯತ್‌ನ ಮಾಜಿ ಅಧ್ಯಕ್ಷ ಪ್ರಕಾಶ್ ಶೆಟ್ಟಿ ಹಾಗೂ ಸದಸ್ಯರು ಉಪಸ್ಥಿತರಿದ್ದರು.


ಯಡ್ತಾಡಿ ಗ್ರಾಮ ಪಂಚಾಯತ್ ಪಿಡಿಒ ಉಮೇಶ್ ನಿರೂಪಿಸಿದರು. ನಂತರ ನಡೆದ ಸಾರ್ವಜನಿಕ ಕುಂದುಕೊರತೆ ಆಲಿಕೆಯಲ್ಲಿ ಗ್ರಾಮಸ್ಥರು ರಸ್ತೆ, ಕುಡಿಯುವ ನೀರಿನ ಸಮಸ್ಯೆ, ವಸತಿ ಯೋಜನೆ, ಮೂಲಸೌಕರ್ಯ ಮತ್ತು ಕಂದಾಯ ಇಲಾಖೆಗೆ ಸಂಬಂಧಿಸಿದ ಮನವಿಗಳನ್ನು ಸಲ್ಲಿಸಿದರು. ಅಧಿಕಾರಿಗಳೊಂದಿಗೆ ಚರ್ಚಿಸಿದ ಶಾಸಕರು, ತ್ವರಿತವಾಗಿ ಕ್ರಮ ಕೈಗೊಳ್ಳುವಂತೆ ಸೂಚಿಸಿದರು

administrator

Related Articles

Leave a Reply

Your email address will not be published. Required fields are marked *

You cannot copy content of this page