• March 26, 2026
  • Last Update March 24, 2026 3:28 pm
  • Brahmavara

ನಿರ್ಮಲ ಆಂಗ್ಲ ಮಾಧ್ಯಮ ಶಾಲೆ ಶೇ.98% ಫಲಿತಾಂಶ; ಸಮೃದ್ಧಿ ಡಿ.ಶೆಟ್ಟಿ ರಾಜ್ಯಕ್ಕೆ 7ನೇ ರ್‍ಯಾಂಕ್

ನಿರ್ಮಲ ಆಂಗ್ಲ ಮಾಧ್ಯಮ ಶಾಲೆ ಶೇ.98% ಫಲಿತಾಂಶ; ಸಮೃದ್ಧಿ ಡಿ.ಶೆಟ್ಟಿ ರಾಜ್ಯಕ್ಕೆ 7ನೇ ರ್‍ಯಾಂಕ್

ವರದಿ : ಚಿತ್ತೂರು ಪ್ರಭಾಕರ ಆಚಾರ್ಯ
ಉಡುಪಿ ಮಿತ್ರಿಕೆ ಸುದ್ಧಿ :

ಬ್ರಹ್ಮಾವರ, ಮೇ.೫: ಬ್ರಹ್ಮಾವರದ ನಿರ್ಮಲ ಆಂಗ್ಲ ಮಾಧ್ಯಮ ಶಾಲೆ ೨೦೨೪-೨೫ನೇ ಸಾಲಿನ ಎಸ್. ಎಸ್. ಎಲ್.ಸಿ ಫಲಿತಾಂಶದಲ್ಲಿ ಶೇ. ೯೮% ಫಲಿತಾಂಶ ದಾಖಲಿಸಿದ್ದು ಈ ಸಂಸ್ಥೆಯ ವಿದ್ಯಾರ್ಥಿನಿ ರಾಜ್ಯಕ್ಕೆ 7ನೇ ರ್‍ಯಾಂಕ್ ಗಳಿಸಿದ್ದಾರೆ.
ಸಮೃದ್ಧಿ ಡಿ.ಶೆಟ್ಟಿ ರಾಜ್ಯಕ್ಕೆ 7ನೇ ರ್‍ಯಾಂಕ್ :
ಈ ಬಾರಿ ಸಮೃದ್ಧಿ ಶೆಟ್ಟಿ (99.04%) 625ರಲ್ಲಿ 619 ಅಂಕಗಳನ್ನು ಪಡೆದು ರಾಜ್ಯಕ್ಕೆ 7ನೇ ರ್‍ಯಾಂಕ್ ಗಳಿಸಿ ಸಂಸ್ಥೆಯಲ್ಲಿ ಪ್ರಥಮ ಸ್ಥಾನಿಯಾಗಿದ್ದಾರೆ. ಹಾಗೂ ಸಮನ್ವಿತಾ ಎನ್. (98.40%) 625ರಲ್ಲಿ 615 ಅಂಕಗಳನ್ನು ಗಳಿಸಿ ಸಂಸ್ಥೆಗೆ ದ್ವಿತೀಯ ಸ್ಥಾನವನ್ನು ತನ್ವಿ ಎಸ್. ಆಚಾರ್ಯ 612(97.92%) ಅಂಕ ಪಡೆದು ತೃತೀಯ ಸ್ಥಾನವನ್ನು ಗಳಿಸಿದ್ದಾರೆ.600ಕ್ಕಿಂತ ಹೆಚ್ಚು ಅಂಕಗಳನ್ನು ತನಯ ಎಸ್. ಆಚಾರ್ಯ (606), ಆದ್ಯಾ ಯು.ಶೆಟ್ಟಿ (604), ಪ್ರತೀಕ್ (603) ಪಡೆದಿರುತ್ತಾರೆ.
ಪರೀಕ್ಷೆಗೆ ಕುಳಿತ ಒಟ್ಟು 40 ವಿದ್ಯಾರ್ಥಿಗಳಲ್ಲಿ 22ಮಂದಿ ವಿಶಿಷ್ಟ ಶ್ರೇಣಿಯಲ್ಲಿ, 15 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ,2ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಪಾಸಾಗಿದ್ದಾರೆ.
ಉತ್ತಮ ಫಲಿತಾಂಶವನ್ನು ದಾಖಲಿಸಿದ ವಿದ್ಯಾರ್ಥಿಗಳನ್ನು ಸಂಸ್ಥೆಯ ಆಡಳಿತ ಮಂಡಳಿ, ಶಾಲೆಯ ಶಿಕ್ಷಕ ವೃಂದದವರನ್ನು ಹಾಗೂ ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ.

administrator

Related Articles

Leave a Reply

Your email address will not be published. Required fields are marked *

You cannot copy content of this page