• March 26, 2026
  • Last Update March 24, 2026 3:28 pm
  • Brahmavara

ಬಾರಕೂರು ಕೋಟೆಕೇರಿ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರಾಗಿ ಸುಗ್ಗಿ ಸುಧಾಕರ ಶೆಟ್ಟಿ

ಬಾರಕೂರು ಕೋಟೆಕೇರಿ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರಾಗಿ ಸುಗ್ಗಿ ಸುಧಾಕರ ಶೆಟ್ಟಿ

ವರದಿ : ಚಿತ್ತೂರು ಪ್ರಭಾಕರ ಆಚಾರ್ಯ
ಉಡುಪಿಮಿತ್ರ ಪತ್ರಿಕೆ ಸುದ್ದಿ :
ಬ್ರಹ್ಮಾವರ,ಅ.೧೨: ಬಾರಕೂರು ಕೋಟೆಕೇರಿ ಮಹೋತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಜೀಣೋದ್ಧಾರ ಸಮಿತಿ ಅಧ್ಯಕ್ಷರಾಗಿ ಉದ್ಯಮಿ ಸುಗ್ಗಿ ಸುಧಾಕರ ಶೆಟ್ಟಿಯವರು ಆಯ್ಕೆಯಾಗಿದ್ದಾರೆ.
ಇವರು ಕರ್ಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ, ಕರ್ಜೆ ಸರಕಾರಿ ಪದವಿ ಪೂರ್ವ ಕಾಲೇಜಿನ ಅಭಿವೃದ್ಧಿ ಸಮಿತಿ ಉಪಾಧ್ಯಕ್ಷರಾಗಿ, ಹುಬ್ಬಳ್ಳಿ – ಧಾರವಾಡ ಬಂಟರ ಸಂಘದ ನಿಕಟಪೂರ್ವ ಅಧ್ಯಕ್ಷರಾಗಿ,ಹಲುವಳ್ಳಿ ಯುತ್ ಕ್ಲಬ್ಬಿನ ಗೌರವಾಧ್ಯಕ್ಷರಾಗಿ, ಕೊಕ್ಕರ್ಣೆ ದಸರ ಸಮಿತಿಯ ಗೌರವಾಧ್ಯಕ್ಷರಾಗಿ, ಉತ್ತರಕರ್ನಾಟಕ ದ.ಕ ಜಿಲ್ಲಾ ಮಿತ್ರಮಂಡಳಿ ಅಧ್ಯಕ್ಷರಾಗಿ ವಿವಿಧ ಸಮಾಜಸೇವಾ ಸಂಘಟನೆಗಳ ಮುಖ್ಯಸ್ಥರಾಗಿ ಅನೇಕ ಸಾಮಾಜಿಕ ಕೆಲಸಗಳನ್ನು ಮಾಡುತ್ತಾ ಬಂದಿರುತ್ತಾರೆ. ಧಾರ್ಮಿಕ, ಶೈಕ್ಷಣಿಕ ಸಾಮಾಜಿಕ ಸೇವಾ ಸಂಘಟನೆಗಳಿಗೆ ಕೊಡುಗೈದಾನಿಯಾಗಿ ಸಹಕಾರ ನೀಡುತ್ತಾ ಬಂದಿರುತ್ತಾರೆ. ಹಲುವಳ್ಳಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಪ್ರಮುಖ ಪಾತ್ರ ನಿರ್ವಹಿಸುತ್ತಿದ್ದಾರೆ. ಕರ್ಜೆ ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಹಾಗೂ ಯಶಸ್ವಿ ಬ್ರಹ್ಮಕಲಶೋತ್ಸವದಲ್ಲಿ ಸುಧಾಕರ ಶೆಟ್ಟರ ಕೊಡುಗೆ ಮಹತ್ತರವಾದುದು.
ಇದೀಗ ಬಾರಕೂರು ಕೋಟೆಕೇರಿ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಅಭಿವೃದ್ಧಿಗೆ ದೇವಸ್ಥಾನದ ಭಕ್ತಾಧಿಗಳು ಹಾಗೂ ಇಲ್ಲಿನ ಪ್ರಮುಖರು ಸುಧಾಕರ ಶೆಟ್ಟಿಯವರಿಗೆ ಜೀರ್ಣೊದ್ಧಾರದ ನಾಯಕತ್ವ ನೀಡಿದ್ದಾರೆ. ಇತ್ತೀಚೆಗಷ್ಟೇ ಈ ದೇವಸ್ಥಾನದಲ್ಲಿ ಅಷ್ಟಮಂಗಲ ಪ್ರಶ್ನೆ ನಡೆದಿದ್ದು ಜೀರ್ಣೋದ್ಧಾರ ಕೆಲಸ ಆರಂಭಗೊಳ್ಳಲಿದೆ..

administrator

Related Articles

Leave a Reply

Your email address will not be published. Required fields are marked *

You cannot copy content of this page