• April 10, 2026
  • Last Update April 9, 2026 4:52 pm
  • Brahmavara

ಬ್ರಹ್ಮಾವರ : ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ರಾಜೇಶ್ ಗಾಣಿಗ ಅಚ್ಲಾಡಿ ಪುನರಾಯ್ಕೆ

ಬ್ರಹ್ಮಾವರ : ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ರಾಜೇಶ್ ಗಾಣಿಗ ಅಚ್ಲಾಡಿ ಪುನರಾಯ್ಕೆ

ಉಡುಪಿ ಮಿತ್ರ ಪತ್ರಿಕೆ ಸುದ್ದಿ

ಬ್ರಹ್ಮಾವರ, ಫೆ. ೧೭: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಬ್ರಹ್ಮಾವರ ತಾಲೂಕು ಘಟಕದ 2025-28-೨೮ನೇ ಸಾಲಿನ ನೂತನ ಅಧ್ಯಕ್ಷರಾಗಿ ಉದಯವಾಣಿಯ ರಾಜೇಶ್ ಗಾಣಿಗ ಅಚ್ಲಾಡಿ ಎರಡನೇ ಅವಧಿಗೆ ಪುನರ್ ಆಯ್ಕೆಯಾಗಿದ್ದು, ಪ್ರಧಾನ ಕಾರ್ಯದರ್ಶಿಯಾಗಿ ವಿಜಯ ಕರ್ನಾಟಕದ ಚಂದ್ರಶೇಖರ್ ಬೀಜಾಡಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಚುನಾವಣಾಧಿಕಾರಿಯಾಗಿರುವ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಸುಬ್ರಹ್ಮಣ್ಯ ಜಿ. ಕುರ್ಯ ಅವರ ಅಧ್ಯಕ್ಷತೆಯಲ್ಲಿ ಫೆ.೧೭ರಂದು ಬ್ರಹ್ಮಾವರ ಗಜಾನನ ಭವನದಲ್ಲಿ ನಡೆದ ಚುನಾವಣೆಯಲ್ಲಿ ಈ ಆಯ್ಕೆ ಮಾಡಲಾಯಿತು.
ಉಪಾಧ್ಯಕ್ಷರಾಗಿ ಪ್ರಜಾವಾಣಿಯ ಶೇಷಗಿರಿ ಭಟ್, ಕೋಶಾಧಿಕಾರಿಯಾಗಿ ವಿಜಯವಾಣಿಯ ರವೀಂದ್ರ ಕೆ., ಕಾರ್ಯದರ್ಶಿಯಾಗಿ ಹರೀಶ್ ಕಿರಣ್ ತುಂಗ ಹಾಗೂ ಕಾರ್ಯಕಾರಿಣಿ ಸಮಿತಿ ಸದಸ್ಯರಾಗಿ ಬಂಡಿಮಠ ಶಿವರಾಮ ಆಚಾರ್ಯ, ಉದಯ ಆಚಾರ್ಯ, ಅಲ್ತಾರು ನಾಗರಾಜ್, ಪ್ರವೀಣ್ ವಿ., ಅನಂತ ನಾಯಕ್ ಅವಿರೋಧವಾಗಿ ಆಯ್ಕೆಯಾದರು.
ಚುನಾವಣಾ ಪ್ರಕ್ರಿಯೆಯಲ್ಲಿ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ ಹಾಗೂ ರಾಜ್ಯ ಸಮಿತಿ ಸದಸ್ಯ ಅಸ್ಟ್ರೋ ಮೋಹನ್ ಸಹಕರಿಸಿದರು. ಈ ಸಂದರ್ಭ ಜಿಲ್ಲಾ ಸಂಘದ ಉಪಾಧ್ಯಕ್ಷ ಚಿತ್ತೂರು ಪ್ರಭಾಕರ ಆಚಾರ್ಯ, ಜಿಲ್ಲಾ ಸಂಘದ ಕಾರ್ಯಕಾರಿ ಸಮಿತಿ ಸದಸ್ಯರಾದ ಮೋಹನ ಉಡುಪ, ಪ್ರವೀಣ್ ಮುದ್ದೂರು ಹಾಗೂ ಬ್ರಹ್ಮಾವರ ಸಂಘದ ಸದಸ್ಯರು ಇದ್ದರು.

administrator

Related Articles

Leave a Reply

Your email address will not be published. Required fields are marked *

You cannot copy content of this page