ವರದಿ : ಚಿತ್ತೂರು ಪ್ರಭಾಕರ ಆಚಾರ್ಯ
ಉಡುಪಿ ಮಿತ್ರ ಪತ್ರಿಕೆ ಸುದ್ಧಿ:
ಬ್ರಹ್ಮಾವರ ವ್ಯವಸಾಯ ಸೇವಾ ಸಹಕಾರಿ ಸಂಘ ಇದರ ಶತಮಾನೋತರ ದಶಮಾನೋತ್ಸvಜ ಅಂಗವಾಗಿ ಅಕ್ಟೋಬರ್ 26 ಆದಿತ್ಯವಾರದಂದು ಸಾಂಸ್ಕೃತಿಕ, ಶೈಕ್ಷಣಕ, ಮತ್ತು ಯಕ್ಷಗಾನ ಕಾರ್ಯಕ್ರಮಗಳ ಸಮ್ಮಿಲನ ಉನ್ನತಿ ವೈಭವ 2025 ವಿದ್ಯಾರ್ಥಿ ವೇತನ ವಿತರಣೆ, ಶೈಕ್ಷಣಿಕ ಕಾರ್ಯಗಾರ, ಕೃಷಿಕರಿಗೆ ಸನ್ಮಾನ ಕಾರ್ಯಕ್ರಮ ಬ್ರಹ್ಮಾವರ ರುಡ್ಸೆಟ್ ಹತ್ತಿರದ ದೇವಕಿ ಕನ್ವೆನ್ಷನ್ ಸೆಂಟರ್ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಬಿರ್ತಿ ರಾಜೇಶ್ ಶೆಟ್ಟಿ ತಿಳಿಸಿದ್ದಾರೆ.
ಅಂದು ಪೂರ್ವಾಹ್ನ ಸಂಘದ11 ಗ್ರಾಮ ಪಂಚಾಯತ್ ವ್ಯಾಪ್ತಿಯ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ದೇಶಪ್ರೇಮ ಮತ್ತು ಜನಪದ ಕಲಾಸ್ಪರ್ಧೆ ನಡೆಯಲಿದ್ದು ಇದರ ಉದ್ಘಾಟನೆಯನ್ನು ಶಾಂತಾರು ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶ್ರೀಮತಿ ಪ್ರೇಮ ಶೆಟ್ಟಿ ನೆರವೇರಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಬ್ರಹ್ಮಾವರ ವ್ಯವಸಾಯ ಸೇವಾ ಸಹಕಾರಿ ಸಂಘದ ಮಾಜಿ ಅಧ್ಯಕ್ಷ ರಾಮಣ್ಣ ಅಡಿಗ, ಹಿರಿಯ ಸದಸ್ಯ ಭಾಸ್ಕರ್ ರೈ ಭಾಗವಹಿಸಲಿದ್ದಾರೆ. ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಕಾರ್ಯಕ್ರಮ ನಡೆಯಲಿದ್ದು ದಿಕ್ಸೂಚಿ ಭಾಷಣವನ್ನು ರಾಷ್ಟ್ರಮಟ್ಟದ ವಿಕಾಸನ ತರಬೇತುದಾರ ಮತ್ತು ಮೋಟಿವೇಟರ್ ಶ್ರೀ ರಾಜೇಂದ್ರ ಭಟ್ ಮಾಡಲಿದ್ದಾರೆ.
ಸಭಾ ಕಾರ್ಯಕ್ರಮ ಮಧ್ಯಾಹ್ನ 3.00 ಗಂಟೆಗೆ ನಡೆಯಲಿದ್ದು ಸಮಾರಂಭದ ಅಧ್ಯಕ್ಷತೆಯನ್ನು ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಬಿರ್ತಿ ರಾಜೇಶ್ ಶೆಟ್ಟಿ ವಹಿಸಲಿದ್ದಾರೆ. ಉದ್ಘಾಟನೆಯನ್ನು ಉಡುಪಿ ಶಾಸಕ ಯಶಪಾಲ್ ಸುವರ್ಣ ನೆರವೇರಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸರಕಾರಿ ಬ್ಯಾಂಕ್ ಮಂಗಳೂರು ಇದರ ಅಧ್ಯಕ್ಷ ಡಾ. ಎಂ. ಎನ್. ರಾಜೇಂದ್ರ ಕುಮಾರ್ ಭಾಗವಹಿಸಲಿದ್ದಾರೆ. ಹೈನುಗಾರರಿಗೆ ರೈತರಿಗೆ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದ್ದು ನಗರಾಭಿವೃದ್ಧಿ ಪ್ರಾಧಿಕಾರ ಉಡುಪಿ ಇದರ ಅಧ್ಯಕ್ಷ ದಿನಕರ ಹೇರೂರು ಹಾಗೂ ದ.ಕ.ಕೇಂದ್ರ ಸಹಕಾರ ಬ್ಯಾಂಕ್ ಮಂಗಳೂರು ಇದರ ನಿರ್ದೇಶಕ ದೇವಿ ಪ್ರಸಾದ್ ಶೆಟ್ಟಿ ನೆರವೇರಿಸಲಿದ್ದಾರೆ. ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ವಿದ್ಯಾರ್ಥಿ ವೇತನ ವಿತರಣೆ ನಡೆಯಲಿದ್ದು ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಇಂದ್ರಾಳಿ ಜಯಕರ ಶೆಟ್ಟಿ ಹಾಗೂ ಉಡುಪಿ ಜಿಲ್ಲೆ ಸಹಕಾರಿ ಸಂಘಗಳ ಉಪನಿಬಂಧಕರಾದ ಶ್ರೀಮತಿ ಲಾವಣ್ಯ ಕೆ.ಆರ್ ಭಾಗವಿಸಲಿದ್ದಾರೆ. ಕೀರ್ತಿಶೇಷ ಇರ್ಮಾಡಿ ತಿಮ್ಮಪ್ಪ ಹೆಗಡೆ ಅವರ ಸಂಸ್ಮರಣೆಯನ್ನು ನಿರ್ದೇಶಕ ಜ್ಞಾನವಸಂತ ಶೆಟ್ಟಿ ನೆರವೇರಿಸಲಿದ್ದಾರೆ. ಮಾಜಿ ಅಧ್ಯಕ್ಷ ವೆಂಕಟ್ರಾಂii ನಾಯಕ್ ಭಾಗವಹಿಸಲಿದ್ದಾರೆ. ಸಂಜೆ 5ರಿಂದ ಪ್ರಸಿದ್ಧ ಅತಿಥಿ ಕಲಾವಿದರ ಕೂಡುವಿಕೆಯಲ್ಲಿ ಮಾರುತಿ ಪ್ರತಾಪ ಯಕ್ಷಗಾನ ಪ್ರದರ್ಶನಗೊಳ್ಳಲಿದೆ




