ವರದಿ : ಚಿತ್ತೂರು ಪ್ರಭಾಕರ ಆಚಾರ್ಯ
ಉಡುಪಿಮಿತ್ರ ಪತ್ರಿಕೆ ಸುದ್ದಿ :
ಬ್ರಹ್ಮಾವರ, ಡಿ.22: ಮಂದಾರ್ತಿಯ ದುರ್ಗಾಪರಮೇಶ್ವರೀ ಅನುದಾನಿತ ಹಿ.ಪ್ರಾ.ಶಾಲೆ, ದುರ್ಗಾಪರಮೇಶ್ವರೀ ಪ್ರೌಢಶಾಲೆ ಹಾಗೂ ದುರ್ಗಾಪರಮೇಶ್ವರೀ ಪದವಿಪೂರ್ವ ಕಾಲೇಜಿನಲ್ಲಿ ಡಿ.24ರಿಂದ 26 ರವರೆಗೆ ರಜತ, ಸುವರ್ಣ ಹಾಗೂ ಶತಮಾನೋತ್ಸವ ಕಾರ್ಯಕ್ರಮ ನಡೆಯಲಿದೆ ಎಂದು ವಿದ್ಯಾ ಸಂಸ್ಥೆಯ ಹಳೆ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳಾದ, ಸುದರ್ಶನ ಶೆಟ್ಟಿ, ಉದಯ ಕುಮಾರ್ ಶೆಟ್ಟಿ, ಕೃಷ್ಣರಾಜ್ ಶೆಟ್ಟಿ ತಿಳಿಸಿದರು. ಅವರು ಮಂದಾರ್ತಿ ದುರ್ಗಾ ಪರಮೇಶ್ವರೀ ಪ್ರೌಢಶಾಲೆಯಲ್ಲಿ ಡಿ.21ರಂದು ಪತ್ರಿಕಾಗೋಷ್ಟಿ ನಡೆಸಿ ಮಾಹಿತಿ ನೀಡಿದರು.

ಹಿ.ಪ್ರಾ.ಶಾಲೆ ಶತಮಾನೋತ್ಸವವನ್ನು, ಪ್ರೌಢಶಾಲೆ ಸುವರ್ಣ ಮಹೋತ್ಸವವನ್ನು, ಪದವಿಪೂರ್ವ ಕಾಲೇಜು ರಜತಮಹೋತ್ಸವವನ್ನು ಆಚರಿಸಿಕೊಳ್ಳುತ್ತಿರುವುದು ಈ ವಿದ್ಯಾ ಸಂಸ್ಥೆಗಳ ವಿಶೇಷತೆಯಾಗಿದೆ. ಕಾರ್ಯಕಮವನ್ನು ಡಿ.24ರಿಂದ 26ರ ತನಕ ಹಮ್ಮಿಕೊಂಡಿದ್ದು ೩ ದಿನಗಳ ಕಾಲ ಇಲ್ಲಿ ವಿವಿಧ ಕಾರ್ಯಕ್ರಮಗಳು ಜರುಗಲಿವೆ. ರಜತ-ಸುವರ್ಣ-ಶತ ಸಂಭ್ರಮದ ಸವಿ ನೆನಪಿಗಾಗಿ ಸುಮಾರು 40 ಲಕ್ಷ ವೆಚ್ಚದಲ್ಲಿ ಹಲವಾರು ಅಭಿವೃದ್ಧಿ ಕಾರ‍್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು ಪ್ರೌಢಶಾಲೆಯ ಬಾಲಕ-ಬಾಲಕಿಯರಿಗೆ ಸುಸಜ್ಜಿತ ಶೌಚಾಲಯ, ಶಾಲೆಯ ಕಟ್ಟಡ ನವೀಕರಣ, ಇಂಟರ್‌ಲಾಕ್ ಅಳವಡಿಕೆ, ಮಿನಿ ಉದ್ಯಾನವನ, ರಂಗ ಮಂದಿರ, ಕಂಪೌಂಡ್ ನಿರ್ಮಿಸಲಾಗಿದೆ.
ಡಿ.24ರಂದು ಶತಮಾನೋತ್ಸವ :
ಹಿ.ಪ್ರಾ.ಶಾಲೆಗೆ ೧೦೦ ವರ್ಷ ತುಂಬಿದ ಸವಿನೆನಪಿಗೆ ಡಿ.24ರಂದು ಶತಮಾನ ಸಂಭ್ರಮ ಕಾರ‍್ಯಕ್ರಮ ನಡೆಯಲಿದೆ. ಅಂದು ಬೆಳಗ್ಗೆ 9ಗಂಟೆಗೆ ಶಾಲೆಯ ಆವರಣದಲ್ಲಿ ಜಿಲ್ಲಾ ವಿದ್ಯಾಂಗ ಉಪನಿರ್ದೇಶಕ ಲೋಕೇಶ್ ಸಿ. ಧ್ವಜಾರೋಹಣ ನೆರವೇರಿಸಲಿದ್ದಾರೆ. ಉಡುಪಿ ಟಿ.ಎಂ.ಎ.ಪೈ ಕಾಲೇಜಿನ ಸಮನ್ವಯಾಧಿಕಾರಿ ಮಹಾಬಲೇಶ್ವರ ರಾವ್ ಅಧ್ಯಕ್ಷತೆ ವಹಿಸಲಿದ್ದಾರೆ. ಸಂಸದ ಕೋಟ ಶ್ರೀನಿವಾಸ ಪೂಜಾರಿ, ಹಿರಿಯರಾದ ಶೇಡಿಕೊಡ್ಲು ವಿಟ್ಠಲ ಶೆಟ್ಟಿ, ತೋಟಗಾರಿಕೆ ಇಲಾಖೆ ನಿವೃತ್ತ ಜಂಟಿ ನಿರ್ದೇಶಕ ಎಚ್.ಜಯಶೀಲ ಶೆಟ್ಟಿ, ಹೆಗ್ಗುಂಜೆ ಗ್ರಾ.ಪಂ.ಅಧ್ಯಕ್ಷ ರಾಮಕೃಷ್ಣ ಉಪಸ್ಥಿತರಿರುವರು.
ಸಂಜೆ ೬ರಿಂದ ಪ್ರೌಢಶಾಲೆ ಸಭಾಂಗಣದಲ್ಲಿ ನಡೆಯುವ ನೂರರ ನೆನಪು ಕಾರ್ಯಕ್ರಮವನ್ನು ಮಂಗಳೂರು ರಾಮಕೃಷ್ಣ ಆಶ್ರಮದ ಅಧ್ಯಕ್ಷ ಸ್ವಾಮಿ ಚಿತಕಾಮಾನಂದಜಿ ಉದ್ಘಾಟಿಸಲಿದ್ದು, ವಿಧಾನಪರಿಷತ್ ಸಭಾಧ್ಯಕ್ಷ ಬಸವರಾಜ್ ಹೊರಟ್ಟಿ ಸಭಾಧ್ಯಕ್ಷತೆ ವಹಿಸಲಿದ್ದಾರೆ. ಖ್ಯಾತ ಸಾಹಿತಿ ಜೋಗಿ ಸವಿ ನುಡಿಯ ಮಾತನಾಡಲಿದ್ದಾರೆ. ಮಾಜಿ ಸಚಿವ ಜಯಪ್ರಕಾಶ್ ಹೆಗ್ಡೆ ಸ್ಮರಣಸಂಚಿಕೆ ಬಿಡುಗಡೆಗೊಳಿಸಲಿದ್ದು, ಉದ್ಯಮಿ ಆನಂದ ಸಿ.ಕುಂದರ್, ಮಂದಾರ್ತಿ ದೇಗುಲದ ಅನುವಂಶಿಕ ಮೊಕ್ತೇಸರ ಎಚ್.ಧನಂಜಯಶೆಟ್ಟಿ, ಉದ್ಯಮಿ ಸುಗ್ಗಿ ಸುಧಾಕರ ಶೆಟ್ಟಿ ಹಾಗೂ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಎಚ್.ಸುದರ್ಶನ ಶೆಟ್ಟಿ, ಕಾರ್ಯದರ್ಶಿ ನಾರಾಯಣ ಆಚಾರ್ಯ, ಶಾಲಾ ಆಡಳಿತ ಮಂಡಳಿಯ ಸಂಚಾಲಕ ಮಹೇಶ್ ಉಡುಪ, ಮುಖ್ಯ ಶಿಕ್ಷಕ ಉದಯ ಕುಮಾರ್ ಶೆಟ್ಟಿ, ಶತಮಾನೋತ್ಸವ ಸಮಿತಿ ಅಧ್ಯಕ್ಷ ಎ.ಮಹೇಶ್ ಶೆಟ್ಟಿ, ಕಾರ್ಯಾಧ್ಯಕ್ಷ ರತ್ನಾಕರ ಎಂ.ಶೆಟ್ಟಿ, ಕಾರ್ಯದರ್ಶಿ ಪ್ರಮೋದ್ ಶೆಟ್ಟಿ ಉಪಸ್ಥಿತರಿರುವರು. ಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ, ಹಳೆ ವಿದ್ಯಾರ್ಥಿಗಳಿಂದ ನೃತ್ಯ, ಶಾಂಭವೀ ನಾಟಕ ಪ್ರದರ್ಶನಗೊಳ್ಳಲಿದೆ.
ಡಿ.25ರಂದು ಸುವರ್ಣ ಸಂಭ್ರಮ:
ಪ್ರೌಢಶಾಲೆಯ ಸುವರ್ಣ ಸಂಭ್ರಮ ಕಾರ್ಯಕ್ರಮ ಸಂಜೆ 7ಗಂಟೆಗೆ ಪ್ರೌಢಶಾಲೆ ಸಭಾಂಗಣದಲ್ಲಿ ನಡೆಯಲಿದ್ದು, ಶಿಕ್ಷಣ ಸಚಿವ ಮಧುಬಂಗಾರಪ್ಪ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಶಾಸಕ ಕಿರಣ್ ಕೊಡ್ಗಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ವೇದಾಂತಿ ಅಮೃತವರ್ಷಿಣಿ ಉಮೇಶ್ ಸನ್ನುಡಿ ಮಾತನಾಡಲಿದ್ದಾರೆ. ಸಂಸದ ಕೋಟ ಗುರುವಂದನೆ ನೆರವೇರಿಸಲಿದ್ದಾರೆ.
ಮಾಜಿ ಸಚಿವ ಜಯಪ್ರಕಾಶ್ ಹೆಗ್ಡೆ, ವಿದ್ಯಾಂಗ ಉಪನಿರ್ದೇಶಕ ಲೋಕೇಶ್, ಕ್ಷೇತ್ರ ಶಿಕ್ಷಣಾಧಿಕಾರಿ ಉಮಾ ಪಿ., ಮಂದಾರ್ತಿ ದೇಗುಲದ ಅನುವಂಶಿಕ ಮೊಕ್ತೇಸರ ಧನಂಜಯ ಶೆಟ್ಟಿ, ದೇಗುಲದ ಕಾರ್ಯನಿರ್ವಹಣಾಧಿಕಾರಿ ಗೋವಿಂದ ನಾಯ್ಕ್ ಹಿರಿಯರಾದ ಶೇಡಿಕೊಡ್ಲು ವಿಟ್ಠಲ ಶೆಟ್ಟಿ, ಮುಖ್ಯ ಶಿಕ್ಷಕ ನಾರಾಯಣ ಮಣೂರು, ಹೆಗ್ಗುಂಜೆ ಗ್ರಾ.ಪಂ. ಅಧ್ಯಕ್ಷ ರಾಮಕೃಷ್ಣ ಹಾಗೂ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಉದಯ ಕುಮಾರ್ ಶೆಟ್ಟಿ, ಪದಾಧಿಕಾರಿಗಳಾದ ಚೋರಾಡಿ ಕೃಷ್ಣರಾಜ್ ಶೆಟ್ಟಿ, ಹರೀಶ್ಚ್ಥಂದ್ರಶೆಟ್ಟಿ, ಎಂ.ನರಸಿಂಹ ನಾಯ್?ಕ ಹಾಗೂ ಶಾಲಾ ಆಡಳಿತ ಮಂಡಳಿಯ ಸದಸ್ಯರು ಉಪಸ್ಥಿತರಿರುವರು. ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ, ಭಜರಂಗ ಬಲಿ ನಾಟಕ ಪ್ರದರ್ಶನಗೊಳ್ಳಲಿದೆ.
ಡಿ.26ರಂದು ಕಾಲೇಜು ರಜತ ಸಂಭ್ರಮ :
ಪದವಿಪೂರ್ವ ಕಾಲೇಜಿನ ರಜತ ಸಂಭ್ರಮ ಪ್ರಯುಕ್ತ ಬೆಳಗ್ಗೆ 9.30ಕ್ಕೆ ಮಂದಾರ್ತಿ ದೇಗುಲದ ಅಧ್ಯಕ್ಷ ಎಚ್.ಧನಂಜಯ ಶೆಟ್ಟಿ ಧ್ವಜಾರೋಹಣ ನೆರವೇರಿಸಲಿದ್ದು, ಗುರುವಂದನೆ, ದಾನಿಗಳ ಗುರುತಿಸುವಿಕೆ, ಹಳೆ ವಿದ್ಯಾರ್ಥಿಗಳ ಸಂಗಮ ಜರಗಲಿದೆ. ಸಂಜೆ ೬ಕ್ಕೆ ರಜತ ಸಂಭ್ರಮ ಜರಗಲಿದ್ದು ಶಾಸಕ ಕಿರಣ್ ಕೊಡ್ಗಿ ಸಭಾಧ್ಯಕ್ಷತೆ ವಹಿಸಲಿದ್ದಾರೆ. ಮಣಿಪಾಲ ಮಾಹೇ ಉಪಕುಲಪತಿ ಡಾ.ಎಚ್.ಎಸ್. ಬಲ್ಲಾಳ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ರಂಗನಟ ಸೇತುರಾಮ್ ನಲ್ನುಡಿ ಮಾತನಾಡಲಿದ್ದಾರೆ. ಸಂಸದ ಕೋಟ ಶ್ರೀನಿವಾಸ ಪೂಜಾರಿ, ಮಾಜಿ ಸಚಿವ ಜಯಪ್ರಕಾಶ್ ಹೆಗ್ಡೆ, ಕುಂದಾಪ್ರ ಕನ್ನಡ ಪ್ರತಿಷ್ಠಾನದ ದೀಪಕ್ ಕುಮಾರ್ ಶೆಟ್ಟಿ, ಪ.ಪೂ. ಉಪನಿರ್ದೇಶಕ ಮಾರುತಿ ಹಾಗೂ ಶಾಲಾ ಆಡಳಿತ ಮಂಡಳಿಯವರು, ಪ್ರಾಂಶುಪಾಲ ಡಾ.ಪ್ರವೀಣ್ ಶೆಟ್ಟಿ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಪ್ರಿಯದರ್ಶನ್ ಶೆಟ್ಟಿ ಮೊದಲಾದವರಿರುವರು.
ಸಾಂಸ್ಕೃತಿಕ ಕಾರ್ಯಕ್ರಮ ಪ್ರಯುಕ್ತ ಕಾಲೇಜು ವಿದ್ಯಾರ್ಥಿಗಳಿಂದ ಹಾಗೂ ಹಳೆ ವಿದ್ಯಾರ್ಥಿಗಳಿಂದ ಕಾರ್ಯಕ್ರಮ, ಝೆಂಕಾರ್ ಮೆಲೋಡಿಸ್ ಅವರಿಂದ ಸಂಗೀತ ಸಂಜೆ ನಡೆಯಲಿದೆ ಎಂದು ಮಾಹಿತಿ ನೀಡಿದ್ದಾರೆ. ಪತ್ರಿಕಾಗೋಷ್ಟಿಯಲ್ಲಿ ಪಿಯುಸಿ ಪ್ರಾಂಶುಪಾಲ ಡಾ.ಪ್ರವೀಣ್‌ಕುಮಾರ್ ಶೆಟ್ಟಿ, ಹಿ.ಪ್ರಾ.ಶಾಲೆಯ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಎಚ್.ಸುದರ್ಶನ ಶೆಟ್ಟಿ, ಪ್ರೌಢಶಾಲೆಯ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಉದಯ ಕುಮಾರ್ ಆರ್. ಶೆಟ್ಟಿ, ಉಪಾಧ್ಯಕ್ಷ ಕೃಷ್ಣರಾಜ್ ಶೆಟ್ಟಿ ಚೋರಾಡಿ, ಪದವಿ ಪೂರ್ವ ಕಾಲೇಜಿನ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಪ್ರಿಯದರ್ಶನ್ ಶೆಟ್ಟಿ, ಉಪಾಧ್ಯಕ್ಷ ಪ್ರಸಾದ್ ಶೆಟ್ಟಿ ಮುದ್ದುಮನೆ, ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಕೆ.ಉದಯಕುಮಾರ್ ಶೆಟ್ಟಿ, ಗ್ರಾಮ ಪಂಚಾಯತ್ ಅಧ್ಯಕ್ಷ ರಾಮಕೃಷ್ಣ ಮಂದಾರ್ತಿ, ಹಳೆವಿದ್ಯಾರ್ಥಿ ನಾಗರಾಜ್ ಅಲ್ತಾರ್ ಉಪಸ್ಥಿತರಿದ್ದರು. ಹಳೆ ವಿದ್ಯಾರ್ಥಿ ಪ್ರಮೋದ್ ಶೆಟ್ಟಿ ವಂದಿಸಿದರು.



