• May 10, 2026
  • Last Update May 7, 2026 4:06 pm
  • Brahmavara

ಮಾ.1ರಂದು ಮುಂಡ್ಕಿನಜಡ್ಡಿನಲ್ಲಿ ಮರಾಟಿ ಹೋಳಿ ಸಂಭ್ರಮ

ಮಾ.1ರಂದು ಮುಂಡ್ಕಿನಜಡ್ಡಿನಲ್ಲಿ ಮರಾಟಿ ಹೋಳಿ ಸಂಭ್ರಮ

ವರದಿ : ಚಿತ್ತೂರು ಪ್ರಭಾಕರ ಆಚಾರ್ಯ
ಉಡುಪಿಮಿತ್ರ ಪತ್ರಿಕೆ ಸುದ್ಧಿ
:
ಬ್ರಹ್ಮಾವರ, ಫೆ.೨೬: ಉಡುಪಿ ಜಿಲ್ಲಾ ಮರಾಠಿ ಸಮಾಜ ಸೇವಾ ಸಂಘ ಕುಂಜಿಬೆಟ್ಟು ಇವರ ನೇತೃತ್ವದಲ್ಲಿ ಮರಾಠಿ ಹೋಳಿ ಸಂಭ್ರಮ ೨೦೨೬ ಕಾರ್ಯಕ್ರಮವನ್ನು ಮಾ. 1ರಂದು

ಬ್ರಹ್ಮಾವರ ತಾಲೂಕಿನ ಚೇರ್ಕಾಡಿ ಗ್ರಾಮದ ಮುಂಡ್ಮಿನಜೆಡ್ಡು ಆರ್.ಕೆ ಪಾಟ್ಕರ್ ಶಾಲಾ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಉಡುಪಿ ಜಿಲ್ಲಾ ಸಂಚಾಲಕ ಉಮೇಶ್ ಎ. ನಾಯ್ಕ ಚೇರ್ಕಾಡಿ ತಿಳಿಸಿದ್ದಾರೆ.


ಅವರು ಫೆ.೨೬ರಂದು ಬ್ರಹ್ಮಾವರದ ಹೋಟೆಲ್ ಗಜಾನನ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಉಡುಪಿ ಜಿಲ್ಲೆಯ ಸುಮಾರು ೧೩೬ ಹತ್ತರಕಟ್ಟೆ (ಹತ್ತು ಸಮಸ್ತರ ಕಟ್ಟೆ)ಗಳ ೩ ಸಾವಿರಕ್ಕೂ ಅಧಿಕ ಜನರು ಹೋಳಿ ಸಂಭ್ರಮದಲ್ಲಿ ಭಾಗಿಯಾಗಲಿದ್ದಾರೆ. ಶೃಂಗೇರಿ ಶಾರದಾ ಪೀಠದ ಜಗದ್ಗುರು ಶಂಕರಾಚಾರ್ಯ ಮಹಾಸಂಸ್ಥಾನಂನ ಶ್ರೀ ವಿಧುಶೇಖರ ಭಾರತಿ ಸ್ವಾಮೀಜಿಗಳ ಉಪಸ್ಥಿತಿಯಲ್ಲಿ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ. ಚಂಡೀಗಢ ಸರಕಾರದ ಮುಖ್ಯ ಕಾರ್ಯದರ್ಶಿ ಎಚ್.ರಾಜೇಶ್ ಪ್ರಸಾದ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಸಂಸದ ಕೋಟ ಶ್ರೀನಿವಾಸ ಪೂಜಾರಿ, ಶಾಸಕರುಗಳಾದ ಯಶಪಾಲ್ ಸುವರ್ಣ ಉಡುಪಿ, ಸುನೀಲ್ ಕುಮಾರ್ ಕಾರ್ಕಳ, ಗುರ್ಮೆ ಸುರೇಶ್ ಶೆಟ್ಟಿ ಕಾಪು, ಕಿರಣ್ ಕುಮಾರ್ ಕೊಡ್ಗಿ ಕುಂದಾಪುರ, ಗುರುರಾಜ್ ಶೆಟ್ಟಿ ಗಂಟಿಹೊಳೆ, ಮಾಜಿ ಸಚಿವರಾದ ಕೆ.ಜಯಪ್ರಕಾಶ್ ಹೆಗ್ಡೆ, ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಮಾಜಿ ಶಾಸಕ ರಘುಪತಿ ಭಟ್, ಉದ್ಯಮಿ ಪ್ರಸಾದ್‌ರಾಜ್ ಕಾಂಚನ್ ಭಾಗವಹಿಸಲಿದ್ದಾರೆ ಎಂದರು.
ಸುದ್ದಿಗೋಷ್ಟಿಯಲ್ಲಿ ಉಡುಪಿ ಜಿಲ್ಲಾ ಮರಾಠಿ ಸಮಾಜ ಸೇವಾ ಸಂಘ ಅಧ್ಯಕ್ಷ ಕೆ.ಟಿ ನಾಯ್ಕ ಚಾಂತಾರು, ಬ್ರಹ್ಮಾವರ ತಾಲೂಕು ಸಂಚಾಲಕ ನಾರಾಯಣ ನಾಯ್ಕ, ಮಾಜಿ ನಿವೃತ್ತ ಉಪಪ್ರಾಂಶುಪಾಲ ಬಿ.ಟಿ ನಾಯ್ಕ್, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಗೋಪಿ.ಕೆ.ನಾಯ್ಕ್ ಮೊದಲಾದವರು ಉಪಸ್ಥಿತರಿದ್ದರು.

administrator

Related Articles

Leave a Reply

Your email address will not be published. Required fields are marked *

You cannot copy content of this page