• March 26, 2026
  • Last Update March 24, 2026 3:28 pm
  • Brahmavara

ಸಾಸ್ತಾನ : ಏಪ್ರಿಲ್ 1ರಿಂದ 3ರವರೆಗೆ ಶ್ರೀ ಶ್ರೀನಿವಾಸ ಕಲ್ಯಾಣೋತ್ಸವ

ಸಾಸ್ತಾನ : ಏಪ್ರಿಲ್ 1ರಿಂದ 3ರವರೆಗೆ ಶ್ರೀ ಶ್ರೀನಿವಾಸ ಕಲ್ಯಾಣೋತ್ಸವ

ವರದಿ : ಚಿತ್ತೂರು ಪ್ರಭಾಕರ ಆಚಾರ್ಯ

ಉಡುಪಿಮಿತ್ರ ಪತ್ರಿಕೆ ಸುದ್ಧಿ :
ಬ್ರಹ್ಮಾವರ, ಮಾ.೧೯: ಏಪ್ರಿಲ್ 1 ರಿಂದ 3ರ ವರೆಗೆ ಸಾಸ್ತಾನ ಕಾರ್ತಿಕೇಯ ಎಸ್ಟೇಟ್‌ನಲ್ಲಿ ಶ್ರೀ ಶ್ರೀನಿವಾಸ ಕಲ್ಯಾಣೋತ್ಸವ ಜರುಗಲಿದ್ದು ಸಾರ್ವಜನಿಕರು ಈ ಉತ್ಸವದಲ್ಲಿ ಭಾಗಿಯಾಗುವಂತೆ ಸಾರ್ವಜನಿಕ ಕಲ್ಯಾಣೋತ್ಸವ ಸಮಿತಿ ಅಧ್ಯಕ್ಷ ಎಮ್.ಸಿ.ಚಂದ್ರಶೇಖರ್ ಹಾಗೂ ಪ್ರಧಾನ ಕಾರ್ಯದರ್ಶಿ ಐರೋಡಿ ವಿಠಲ ಪೂಜಾರಿ ವಿನಂತಿಸಿದ್ದಾರೆ.
ಏಪ್ರಿಲ್ ೧ರಂದು ಸಾಮೂಹಿಕ ದೇವತಾ ಪ್ರಾರ್ಥನೆ ಸ್ವಸ್ತಿವಾಚನ, ಪುಣ್ಯಾಹವಾಚನ, ‘ದ್ವಾದಶ ನಾಳಿಕೆರ ಮಹಾ ಗಣಪತಿಯಾಗ’, ಮಧ್ಯಾಹ್ನ 12 ರಿಂದ ಪೂರ್ಣಾಹುತಿ ಪ್ರಸಾದ ವಿತರಣೆ ನಡೆಯಲಿದೆ.
ಇದೇ ದಿನ ಮಧ್ಯಾಹ್ನ 3 ರಿಂದ ಚಂಡೆ ಮತ್ತು ಮಂಗಳವಾದ್ಯಗಳೊಂದಿಗೆ ಹೊರ ಕಾಣಿಕೆ ಮೆರವಣಿಗೆ ಮತ್ತು ಸಮರ್ಪಣೆ ಜರುಗಲಿದೆ. ಏಪ್ರಿಲ್ 2ರಂದು ಬೆಳಿಗ್ಗೆ 9:೦೦ ರಿಂದ ದೇವತಾ ಪ್ರಾರ್ಥನೆ ನವಗ್ರಹ ಹೋಮ ಮಧ್ಯಾಹ್ನ 12 ರಿಂದ ಪೂರ್ಣಾಹುತಿ ಪ್ರಸಾದ ವಿತರಣೆ, ಮಧ್ಯಾಹ್ನ 3 ರಿಂದ ಶ್ರೀ ಪ್ರವೀಣ್ ಪಡುಕೆರೆ ನೇತೃತ್ವದಲ್ಲಿ ವಿಶೇಷ ಕುಣಿತ ಭಜನೆ ಸಂಜೆ 5:30ರಿಂದ ಶ್ರೀ ಪುತ್ತೂರು ಜಗದೀಶ್ ಆಚಾರ್ ಮತ್ತು ತಂಡದವರಿಂದ ಭಕ್ತಿರಸಮಂಜರಿ, ರಾತ್ರಿ 7 ರಿಂದ ಶ್ರೀ ವಿದ್ವಾನ್ ಡಾ.ವಿಜಯ ಮಂಜರ್ ಪಾಂಡೇಶ್ವರ ಇವರಿಂದ ಧಾರ್ಮಿಕ ಸಂದೇಶ ನಡೆಯಲಿದೆ. ನಂತರ ನಡೆಯುವ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಸಭಾಧ್ಯಕ್ಷತೆಯನ್ನು ಸಾರ್ವಜನಿಕ ಶ್ರೀ ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿಯ ಅಧ್ಯಕ್ಷ ಎಂ.ಸಿ. ಚಂದ್ರಶೇಖರ್ ಪೂಜಾರಿ ವಹಿಸಲಿದ್ದಾರೆ. ಕಾರ್ಯಕ್ರಮವನ್ನು ಕರ್ನಾಟಕ ಸರ್ಕಾರದ ಉಸ್ತುವಾರಿ ಸಚಿವೆ ಶ್ರೀಮತಿ ಲಕ್ಷ್ಮಿ ಹೆಬ್ಬಾಳ್ಕರ್ ಉದ್ಘಾಟಿಸಲಿದ್ದಾರೆ.
ಅತಿಥಿಗಳಾಗಿ ಸಂಸದ ಕೋಟ ಶ್ರೀನಿವಾಸ್ ಪೂಜಾರಿ ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ, ಮಾಜಿ ಸಚಿವ ಜಯಪ್ರಕಾಶ್ ಹೆಗ್ಡೆ, ಮಾಜಿ ಸಚಿವ ಪ್ರಮೋದ್ ಮದರಾಜ್, ಕೋಟ ಶ್ರೀ ಮೃತೇಶ್ವರೀ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಆನಂದ ಸಿ.ಕುಂದರ್. ಹೈದರಾಬಾದ್‌ನ ಹೋಟೆಲ್ ಉದ್ಯಮಿ ಮಾರಣಕಟ್ಟೆ ಶ್ರೀ ಕೃಷ್ಣಮೂರ್ತಿ ಮಂಜರು, ವಿದ್ವಾನ್ ಡಾ.ವಿಜಯಮಂಜರ್ ಪಾಂಡೇಶ್ವರ, ಕಾರ್ತಿಕೇಯ ಎಸ್ಟೇಟ್ ಇದರ ಆಡಳಿತ ಪಾಲುದಾರ ಸುರೇಶ್ ಬೆಟ್ಟಿನ್, ಸಾಲಿಗ್ರಾಮ ಗುರು ನರಸಿಂಹ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ P. ಎಸ್ ಕಾರಂತ, ಸಾಲಿಗ್ರಾಮ ಪಟ್ಟಣ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಸುಕನ್ಯ ಹೆಗ್ಡೆ ಭಾಗವಹಿಸಲಿದ್ದಾರೆ.
ಈ ಸಂದರ್ಭ ಕೋಟತಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷ ಸತೀಶ್ ಕುಂದರ್, ಪಾಂಡೇಶ್ವರ ಗ್ರಾಮ ಪಂಚಾಯತ್ ಅಧ್ಯಕ್ಷೆ ಸುಶೀಲ ಪೂಜಾರಿ, ಐರೋಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಸಕು ಕೋಡಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶ್ರೀಮತಿ ಗೀತಾ ಖಾರ್ವಿ, ಕೋಟ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಜ್ಯೋತಿ ಭರತ್ ಶೆಟಿ, ಕಲ್ಯಾಣೋತ್ಸವ ಪ್ರಧಾನ ಕಾರ್ಯದರ್ಶಿ ಐರೋಡಿ ವಿಠ್ಠಲ್ ಪೂಜಾರಿ ಉಪಸ್ಥಿತರಿರುವರು.
ಏಪ್ರಿಲ್ 3ರಂದು ಬೆಳಿಗ್ಗೆ 9.00 ರಿಂದ ಸ್ಥಳ ಶುದ್ದಿ ,ಪುಣ್ಯಾಹವಾಚನ, ಸಾಮೂಹಿಕ ಸತ್ಯನಾರಾಯಣ ಪೂಜೆ, ಸಾಮೂಹಿಕ ವಿಷ್ಣು ಸಹಸ್ರನಾಮ ಪಾರಾಯಣ, ಮಧ್ಯಾಹ್ನ ೧೨ ರಿಂದ ಮಹಾಮಂಗಳಾರತಿ, ಪ್ರಸಾದ ವಿನಿಯೋಗ, ಮಧ್ಯಾಹ್ನ 3 ರಿಂದ ಸಾಲಿಗ್ರಾಮ ಶ್ರೀ ಗುರುದೇನರಸಿಂಹ ದೇವಸ್ಥಾನದಿಂದ ಕುಣಿತ ಭಜನೆ, ಸ್ತಬ್ದ ಚಿತ್ರ, ಚಂಡೆ ಹಾಗೂ ಸಕಲ ಮಂಗಳವಾದ್ಯಗಳೊಂದಿಗೆ ಪದ್ಮಾವತಿ ಸಹಿತ ಶ್ರೀ ಶ್ರೀನಿವಾಸ ದೇವರ ದಿವ್ಯ ಶೋಭಾಯಾತ್ರೆ ನಡೆಯಲಿದೆ. ಸಂಜೆ 5ರಿಂದ ಶ್ರೀ ದೇವರ ವಿವಾಹ ಮಂಟಪ ಪ್ರವೇಶ, ಸೀಮಾಂತ ಪೂಜೆ, ವಿವಾಹ ಮಂಟಪಕ್ಕೆ ಶ್ರೀ ಪದ್ಮಾವತಿ ದೇವಿಯ ಆಗಮನ, ಸ್ವರ್ಣಮಣಿ ಬಂಧನ, ಮಹೂರ್ತ ನಿರೀಕ್ಷಣೆ, ಮಾಲಾಧಾರಣೆ, ಸಂಜೆ6.30ಕ್ಕೆ ಓದಗುವ ಗೋಧೂಳಿ ಲಗ್ನ ಸುಮೂರ್ತದಲ್ಲಿ ಶ್ರೀ ಶ್ರೀನಿವಾಸ ದೇವರಿಗೆ ಶ್ರೀ ಪದ್ಮಾವತಿ ದೇವಿಯು ಕನ್ಯಾದಾನ “ಶ್ರೀ ಶ್ರೀನಿವಾಸ ಕಲ್ಯಾಣೋತ್ಸವ” ಕಂಕಣ, ಮಂಗಳಸೂತ್ರ ಸಮರ್ಪಣೆ, ವಿವಾಹ ಹೋಮ, ಮಂಗಳಾಚಾರಣೆ, ಮಹಾಪ್ರಸನ್ನ ಪೂಜೆ, ಅಷ್ಟಾವಧಾನ ಸೇವೆ, ತೀರ್ಥಪ್ರಸಾದ ವಿನಿಯೋಗ ಸಾರ್ವಜನಿಕ ಮಹಾ ಅನ್ನಸಂತರ್ಪಣೆ ನಡೆಯಲಿದೆ ಎಂದು ಅವರು ತಿಳಿಸಿದ್ದಾರೆ.
ಈ ಪುಣ್ಯ ಕಾರ್ಯಕ್ರಮಕ್ಕೆ ಹೊರೆ ಕಾಣಿಕೆಯನ್ನು ಸಲ್ಲಿಸುವವರು ಏಪ್ರಿಲ್ 1ರಂದು ಮಂಗಳವಾರ ಮಧ್ಯಾಹ್ನ 3ರಿಂದ ಶ್ರೀ ಶ್ರೀನಿವಾಸ ಕಲ್ಯಾಣೋತ್ಸವದ ಉಗ್ರಾಣಕ್ಕೆ ಸಲ್ಲಿಸಬೇಕಾಗಿ ಕಾರ್ಯಕ್ರಮ ಸಂಘಟಕರು ವಿನಂತಿಸಿದ್ದಾರೆ.

administrator

Related Articles

Leave a Reply

Your email address will not be published. Required fields are marked *

You cannot copy content of this page