udupimitra.in
  • August 16, 2026
  • Last Update August 15, 2026 5:37 pm
  • Brahmavara

ಸುಜ್ಞಾನ ಪಿಯು ಕಾಲೇಜಿನಲ್ಲಿ ಸ್ವಾತಂತ್ರ್ಯೋತ್ಸವ

ಸುಜ್ಞಾನ ಪಿಯು ಕಾಲೇಜಿನಲ್ಲಿ ಸ್ವಾತಂತ್ರ್ಯೋತ್ಸವ

ಉಡುಪಿಮಿತ್ರ ಪತ್ರಿಕೆ ಸುದ್ಧಿ :
ಬ್ರಹ್ಮಾವರ, ಅ.೧೫: ಕುಂದಾಪುರ: ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಗುಣಮಟ್ಟದ ಶಿಕ್ಷಣವನ್ನು ಗ್ರಾಮೀಣ ಪರಿಸರಕ್ಕೂ ತಲುಪಿಸುವ ನಿಟ್ಟಿನಲ್ಲಿ ಸುಜ್ಞಾನ ಸಂಸ್ಥೆ ಮಹತ್ವದ ಕಾರ್ಯ ನಿರ್ವಹಿಸುತ್ತಿದೆ ಎಂದು ಕರ್ನಾಟಕ ಮುಖ್ಯಮಂತ್ರಿಯವರ ಮಾಜಿ ಕಾನೂನು ಸಲಹೆಗಾರ ಹಾಗೂ ಹಿರಿಯ ವಕೀಲ ಕೆ. ದಿವಾಕರ್ ಹೇಳಿದರು.


ಅವರು ಸುಜ್ಞಾನ ಪಿಯು ಕಾಲೇಜು ಹಾಗೂ ವಿದ್ಯಾರಣ್ಯ ಇಂಗ್ಲಿಷ್ ಮೀಡಿಯಂ ಸ್ಕೂಲ್ ಆವರಣದಲ್ಲಿ ನಡೆದ ಭಾರತದ ೮೦ನೇ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ನೆರವೇರಿಸಿ ಮುಖ್ಯ ಅಭ್ಯಾಗತರಾಗಿ ಮಾತನಾಡಿದರು.


ಭಾರತ ಇಂದು ಬಾಹ್ಯಾಕಾಶ, ರಕ್ಷಣಾ ತಂತ್ರಜ್ಞಾನ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಜಾಗತಿಕ ಮಟ್ಟದಲ್ಲಿ ತನ್ನ ಸಾಮರ್ಥ್ಯವನ್ನು ಸಾಬೀತುಪಡಿಸುತ್ತಿದೆ. ಚಂದ್ರಯಾನ ಸೇರಿದಂತೆ ಬಾಹ್ಯಾಕಾಶ ಕ್ಷೇತ್ರದ ಸಾಧನೆಗಳು ಹಾಗೂ ದೇಶದ ರಕ್ಷಣಾ ಸಾಮರ್ಥ್ಯವು ಭಾರತದ ಪ್ರಗತಿಗೆ ಸಾಕ್ಷಿಯಾಗಿದೆ. ವಿದ್ಯಾರ್ಥಿಗಳು ಇಂಜಿನಿಯರಿಂಗ್‌ನಂತಹ ವೃತ್ತಿಪರ ಶಿಕ್ಷಣದ ಜೊತೆಗೆ ಕೃಷಿ ಸಂಶೋಧನೆ, ಭೌತಶಾಸ್ತ್ರ, ರಸಾಯನಶಾಸ್ತ್ರ, ಸಸ್ಯಶಾಸ್ತ್ರ ಸೇರಿದಂತೆ ಮೂಲ ವಿಜ್ಞಾನ ಕ್ಷೇತ್ರಗಳತ್ತಲೂ ಹೆಚ್ಚಿನ ಆಸಕ್ತಿ ಬೆಳೆಸಿಕೊಳ್ಳಬೇಕು ಎಂದು ದಿವಾಕರ್ ಸಲಹೆ ನೀಡಿದರು.


ಒಂದು ಶಿಕ್ಷಣ ಸಂಸ್ಥೆಯ ನಿಜವಾದ ಆಸ್ತಿ ಉತ್ತಮ ಶಿಕ್ಷಕರು. ನೈಸರ್ಗಿಕ ಪರಿಸರದಲ್ಲಿ ವಿದ್ಯಾರ್ಥಿಗಳ ಸಮಗ್ರ ಬೆಳವಣಿಗೆಗೆ ಅವಕಾಶ ಕಲ್ಪಿಸುತ್ತಿರುವ ಸುಜ್ಞಾನ ಸಂಸ್ಥೆಯು ಮುಂದಿನ ದಿನಗಳಲ್ಲಿ ಮತ್ತಷ್ಟು ವಿಸ್ತರಿಸಿ ವೃತ್ತಿಪರ ಶಿಕ್ಷಣ ಸಂಸ್ಥೆಯಾಗಿ, ವಿಶ್ವವಿದ್ಯಾಲಯ ಮಟ್ಟಕ್ಕೆ ಬೆಳೆಯಲಿ ಎಂದು ಅವರು ಶುಭ ಹಾರೈಸಿದರು.


ಕಾರ್ಯಕ್ರಮದಲ್ಲಿ ಸುಜ್ಞಾನ ಎಜುಕೇಶನಲ್ ಟ್ರಸ್ಟ್‌ನ ಅಧ್ಯಕ್ಷ ಡಾ. ರಮೇಶ್ ಶೆಟ್ಟಿ, ಕಾರ್ಯದರ್ಶಿ ಪ್ರತಾಪಚಂದ್ರ ಶೆಟ್ಟಿ, ಕೋಶಾಧಿಕಾರಿ ಭರತ್ ಶೆಟ್ಟಿ, ಪ್ರಾಂಶುಪಾಲರು, ಉಪನ್ಯಾಸಕರು, ಶಿಕ್ಷಕ ವೃಂದ, ವಿದ್ಯಾರ್ಥಿಗಳು ಹಾಗೂ ರಕ್ಷಕರು ಉಪಸ್ಥಿತರಿದ್ದರು.
ಇಂಗ್ಲಿಷ್ ವಿಭಾಗದ ಮುಖ್ಯಸ್ಥರಾದ ವಿನಯ್ ಕುಮಾರ್ ಕಾರ್ಯಕ್ರಮವನ್ನು ಸ್ವಾಗತಿಸಿ, ನಿರೂಪಿಸಿ, ವಂದಿಸಿದರು.

administrator

Related Articles

Leave a Reply

Your email address will not be published. Required fields are marked *

You cannot copy content of this page