ಉಡುಪಿಮಿತ್ರ ಪತ್ರಿಕೆ ಸುದ್ಧಿ :
ಉಡುಪಿ ಜಿಲ್ಲಾ ಚಿನ್ನಬೆಳ್ಳಿ ಕೆಲಸಗಾರರ ಸಂಘ (ರಿ.) ಇದರ ವಾರ್ಷಿಕ ಮಹಾಸಭೆ, ಸನ್ಮಾನ, ಪ್ರತಿಭಾ ಪುರಸ್ಕಾರ ಹಾಗೂ ಅಭಿನಂದನಾ ಕಾರ್ಯಕ್ರಮ ಸೆ.೬ಂದು ಉಡುಪಿ ಕುಂಜಿಬೆಟ್ಟಿನ ಗಾಯತ್ರಿ ಕಲ್ಯಾಣ ಮಂಟಪದಲ್ಲಿ ನಡೆಯಲಿದೆ.
ಸಭಾ ಕಾರ್ಯಕ್ರಮ ಮಧ್ಯಾಹ್ನ ೩:೩೦ ರಿಂದ ಆರಂಭಗೊಳ್ಳಲಿದ್ದು ಸಂಘದ ಅಧ್ಯಕ್ಷ ರವಿಚಂದ್ರ ಆಚಾರ್ಯ ಸಭಾಧ್ಯಕ್ಷತೆಯನ್ನು ವಹಿಸಲಿದ್ದಾರೆ. ಉದ್ಘಾಟಕರಾಗಿ ಸಂಸದ ಕೋಟ ಶ್ರೀನಿವಾಸ ಪೂಜಾರಿ, ಮುಖ್ಯ ಅತಿಥಿಗಳಾಗಿ ಉಡುಪಿ ಶಾಸಕ ಯಶಪಾಲ ಸುವರ್ಣ, ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ, ಉದ್ಯಮಿ ವಿಶ್ವನಾಥ ರಾವ್ ಉಡುಪಿ, ನ್ಯಾಯವಾದಿ ಗಂಗಾಧರ ಎಚ್.ಎಂ., ಸಂಘದ ಗೌರವಾಧ್ಯಕ್ಷ ಬಾಲಕೃಷ್ಣ ಆಚಾರ್ಯ, ಕುಂದಾಪುರ ತಾಲೂಕು ಚಿನ್ನ ಬೆಳ್ಳಿ ಕೆಲಸಗಾರರ ಸಂಘದ ಅಧ್ಯಕ್ಷ ಬಿ ಕುಶಕುಮಾರ್, ಕಾರ್ಕಳ ಚಿನ್ನಬೆಳ್ಳಿ ಕೆಲಸಗಾರ ಸಂಘದ ಅಧ್ಯಕ್ಷ ಎಂ. ರಮೇಶ ಆಚಾರ್ಯ, ರಾಷ್ಟ್ರೀಯ ವಿಶ್ವ ಬ್ರಾಹ್ಮಣ ಸಮಾಜ ಸೇವಾ ಸಂಘದ ಅಧ್ಯಕ್ಷ ಕೆ ವೆಂಕಟೇಶ್ ಆಚಾರ್ಯ ಭಾಗವಹಿಸಲಿದ್ದಾರೆ.
ಇದೇ ಸಂದರ್ಭ ಹಿರಿಯ ಚಿನ್ನ ಬೆಳ್ಳಿ ಕುಶಲಕರ್ಮಿಗಳಾದ ಎನ್. ಭಾಸ್ಕರ ಆಚಾರ್ಯ ಗೋಳಿಕಟ್ಟೆ ಹಾಗೂ ಸತೀಶ್ ಶೇಟ್ ಇವರನ್ನು ಸನ್ಮಾನಿಸಲಾಗುವುದು. ಎಸ್. ಎಸ್ ಎಲ್ ಸಿ ಹಾಗೂ ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಪಡೆದಿರುವ ಸಂಘದ ಸದಸ್ಯರ ಮಕ್ಕಳನ್ನು ಗೌರವಿಸಲಾಗುವುದು ಎಂದು ಸಂಘದ ಪ್ರಧಾನ ಕಾರ್ಯದರ್ಶಿ ರಘುನಾಥ ಆಚಾರ್ಯ ಉಡುಪಿ ಇವರು ತಿಳಿಸಿರುತ್ತಾರೆ.



