• March 26, 2026
  • Last Update March 24, 2026 3:28 pm
  • Brahmavara

ಜಿಲ್ಲೆಯಲ್ಲಿ ರೆಡ್ ಅಲರ್ಟ್ :ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಜಿಲ್ಲಾಡಳಿತಕ್ಕೆ ಸಚಿವೆ ಲಕ್ಷ್ಮೀ ಆರ್ ಹೆಬ್ಬಾಳಕರ್ ಸೂಚನೆ

ಜಿಲ್ಲೆಯಲ್ಲಿ ರೆಡ್ ಅಲರ್ಟ್ :ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಜಿಲ್ಲಾಡಳಿತಕ್ಕೆ ಸಚಿವೆ ಲಕ್ಷ್ಮೀ ಆರ್ ಹೆಬ್ಬಾಳಕರ್ ಸೂಚನೆ

ಉಡುಪಿ ಮಿತ್ರ ಪತ್ರಿಕೆ ಸುದ್ಧಿ
ಉಡುಪಿ, ಮೇ ೨೬: ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋ?ಣೆಯಾಗಿರುವ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಮುನ್ನೆಚ್ಚರಿಕೆ ಕ್ರಮಕೈಗೊಳ್ಳುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಆರ್ ಹೆಬ್ಬಾಳಕರ್ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ್ದಾರೆ. ಜೊತೆಗೆ, ಎಚ್ಚರಿಕೆಯಿಂದ ಇರುವಂತೆ ಸಾರ್ವಜನಿಕರಲ್ಲೂ ಮನವಿ ಮಾಡಿದ್ದಾರೆ.
ಜಿಲ್ಲೆಯಾದ್ಯಂತ ಭಾರಿ ಪ್ರಮಾಣದಲ್ಲಿ ಮಳೆಯಾಗುತ್ತಿದ್ದು, ಮುಂದಿನ ಮೂರು ದಿನ ಕೂಡ ಬಾರಿ ಮಳೆ ಮುನ್ಸೂಚನೆ ನೀಡಲಾಗಿದೆ. ಪ್ರವಾಸಿ ತಾಣಗಳಲ್ಲಿ, ನದಿ – ಸಮುದ್ರ ಪಾತ್ರಗಳಲ್ಲಿ ಸಾಕ? ಮುನ್ನೆಚ್ಚರಿಕೆ ವಹಿಸಬೇಕು. ಅಪಾಯಕಾರಿ ಸ್ಥಳಗಳಲ್ಲಿ ಪ್ರವಾಸಿಗರಿಗೆ ನಿ?ಧ ಹೇರಬೇಕು ಎಂದು ಸಚಿವರು ತಿಳಿಸಿದ್ದಾರೆ.
ಸಮುದ್ರ ಹಾಗೂ ನದಿ ತಟದಲ್ಲಿ ವಾಸಿಸುತ್ತಿರುವ ಜನರನ್ನು ಅಗತ್ಯಬಿದ್ದರೆ ಮುನ್ನೆಚ್ಚರಿಕೆ ಕ್ರಮವಾಗಿ ಸ್ಥಳಾಂತರಿಸಬೇಕು. ಜನರ ಅನುಕೂಲಕ್ಕಾಗಿ ಕಾಳಜಿ ಕೇಂದ್ರಗಳನ್ನು ತೆಗೆಯಬೇಕು. ಏಳು ತಾಲೂಕು ಜನರ ಅನುಕೂಲಕ್ಕಾಗಿ ದಿನ 24 ಗಂಟೆ ಸಹಾಯವಾಣಿ ಕಾರ್ಯನಿರ್ವಹಿಸಬೇಕು ಎಂದು ಸಚಿವೆ ಹೆಬ್ಬಾಳಕರ್ ತಿಳಿಸಿದ್ದಾರೆ. ಸಾರ್ವಜನಿಕರು ಸಹ ಎಚ್ಚರಿಕೆ ವಹಿಸಬೇಕು, ಜಿಲ್ಲಾಡಳಿತದೊಂದಿಗೆ ಸಹಕರಿಸಬೇಕು ಎಂದು ಸಚಿವರು ಮನವಿ ಮಾಡಿದ್ದಾರೆ.

administrator

Related Articles

Leave a Reply

Your email address will not be published. Required fields are marked *

You cannot copy content of this page