ವರದಿ : ಚಿತ್ತೂರು ಪ್ರಭಾಕರ ಆಚಾರ್ಯ
ಉಡುಪಿಮಿತ್ರ ಪತ್ರಿಕೆ ಸುದ್ದಿ :
ಬ್ರಹ್ಮಾವರ, ಎ.೦೮:
ಸಾವಿರಾರು ಜನರಿಗೆ ಸ್ವಂತ ಉದ್ಯೋಗಕ್ಕೆ ರುಡ್‌ಸೆಟ್ ಸಂಸ್ಥೆ ನಿರ್ದೇಶನ ನೀಡಿ ಅವರ ಬದುಕಿಗೆ ಶಕ್ತಿ ನೀಡಿದೆ. ಸಂಸ್ಥೆಯಲ್ಲಿ ತರಬೇತಿ ಪಡೆದವರು ಶ್ರದ್ಧೆ, ಆತ್ಮವಿಶ್ವಾಸದಿಂದ ಗುರಿ ಮುಟ್ಟುತ್ತೇನೆ ಎಂಬ ವಿಶ್ವಾಸದಲ್ಲಿ ಮುಂದುವರಿದಾಗ ಯಶಸ್ಸು ಖಂಡಿತಾ ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ ನುಡಿದರು. ಅವರು ಗ್ರಾಮೀಣಾಭಿವೃದ್ಧಿ ಮತ್ತು ಸ್ವ-ಉದ್ಯೋಗ ತರಬೇತಿ ಸಂಸ್ಥೆ (ರುಡ್‌ಸೆಟ್) ನಡೆಸುತ್ತಿರುವ ಮಹಿಳಾ ಟೈಲರಿಂಗ್ ತರಬೇತಿಯ ಉದ್ಘಾಟನಾ ಸಮಾರಂಭ ಉದ್ಘಾಟಿಸಿ ಮಾತನಾಡಿದರು.

. ಉಡುಪಿ, ದ.ಕ ಜಿಲ್ಲೆಯಿಂದ ಸರಕಾರಿ ಹುದ್ದೆಗಳಿಗೆ ಅರ್ಜಿ ಹಾಕುವವರೇ ಇಲ್ಲ. ಪೋಲೀಸ್ ಸಿಬ್ಬಂದಿ ಹುದ್ದೆಗೂ ಅರ್ಜಿ ಹಾಕಲ್ಲ. ಉತ್ತರ ಕರ್ನಾಟಕದವರು ಮಾತ್ರ ಸರಕಾರಿ ಉದ್ಯೋಗಕ್ಕೆ ಅರ್ಜಿ ಹಾಕುತ್ತಾರೆ. ಬ್ಯಾಂಕಿಂಗ್ ಉದ್ಯೋಗಕ್ಕೆ ಕರ್ನಾಟಕದವರು ಪರೀಕ್ಷೆ ಬರೆಯುತ್ತಿಲ್ಲ.. ಹಾಗಾಗಿ ಕನ್ನಡ ಭಾಷೆ ಗೊತ್ತಿಲ್ಲದವರೇ ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ಉದ್ಯೋಗzಲ್ಲಿದ್ದಾರೆ ಎಂದರು.
ಮುಖ್ಯ ಅತಿಥಿಯಾಗಿ ಲೀಡ್ ಬ್ಯಾಂಕ್ ಮ್ಯಾನೇಜರ್ ಶ್ರೀ ಹರೀಶ್ ಜಿ. ಮಾತನಾಡಿ ಶಿಬಿರಾರ್ಥಿಗಳಿಗೆ ಶುಭ ಹಾರೈಸಿದರು.

ಅಧ್ಯಕ್ಷತೆಯನ್ನು ರುಡ್ಸೆಟ್ ಸಂಸ್ಥೆಯ ನಿರ್ದೇಶಕ ಡಾ. ಬೊಮ್ಮಯ್ಯ ಎಂ. ವಹಿಸಿದ್ದರು.
ವೇದಿಕೆಯಲ್ಲಿ ಟೈಲರಿಂಗ್ ತರಬೇತುದಾರರಾದ ಸುಮತಿ ಸುವರ್ಣ, ಆಸರೆ ಗೌರವಾಧ್ಯಕ್ಷ ರಾಜೇಶ್ ದೇವಾಡಿಗ, ಸಂಸ್ಥೆಯ ಆಸರೆ ಅಧ್ಯಕ್ಷ ರಾಮಚಂದ್ರ ಆಚಾರ್ಯ, ಸಂಘಟನೆಯ ಮಹೇಶ್ ಮಲ್ಪೆ, ಸಂಸ್ಥೆಯ ಸಿಬ್ಬಂದಿ ವರ್ಗದವರು, ಶಿಬಿರಾರ್ಥಿಗಳು ಉಪಸ್ಥಿತರಿದ್ದರು.
ಶಾಂತಪ್ಪ ಸ್ವಾಗತಿಸಿದರು. ಸಂತೋಷ್ ನಿರೂಪಿಸಿದರು.ರವಿ ವಂದಿಸಿದರು.



