udupimitra.in
  • June 24, 2026
  • Last Update June 23, 2026 5:23 pm
  • Brahmavara

ಮಾರಣಕಟ್ಟೆಯಲ್ಲಿ 3ನೇ ವಾರ್ಷಿಕೋತ್ಸವ, ಸನ್ಮಾನ

ಮಾರಣಕಟ್ಟೆಯಲ್ಲಿ 3ನೇ ವಾರ್ಷಿಕೋತ್ಸವ, ಸನ್ಮಾನ

ವರದಿ: ಚಿತ್ತೂರು ಪ್ರಭಾಕರ ಆಚಾರ್ಯ
ಉಡುಪಿ ಮಿತ್ರ ಪತ್ರಿಕೆ ಸುದ್ಧಿ :

ಬ್ರಹ್ಮಾವರ, ಎ.೫: ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ.) ಅಂಬೇಡ್ಕರ್ ವಾದ ಗ್ರಾಮ ಶಾಖೆ ಚಿತ್ತೂರು – ಮಾರಣಕಟ್ಟೆ ವತಿಯಿಂದ ಸಂವಿಧಾನ ಶಿಲ್ಪಿ ಡಾ.ಅಂಬೇಡ್ಕರ್‌ರವರ ೧೩೫ನೇ ಜಯಂತಿ ಹಾಗೂ ಚಿತ್ತೂರು – ಮಾರಣಕಟ್ಟೆ ಶಾಖೆಯ ೩ನೇ ವರ್ಷದ ವಾರ್ಷಿಕ ಉತ್ಸವ ಎ.೧೪ರಂದು ಮಾರಣಕಟ್ಟೆಯ ಅಂಬೇಡ್ಕರ್ ಭವನದಲ್ಲಿ ನಡೆಯಿತು.
ಸಮಾರಂಭದ ಅಧ್ಯಕ್ಷತೆಯನ್ನು ಸಂಘಟನೆಯ ಕುಂದಾಪುರ ತಾಲೂಕು ಸಂಚಾಲಕ ಕೆ.ಸಿ.ರಾಜು ಬೆಟ್ಟಿನಮನೆ ಇವರು ವಹಿಸಿದ್ದರು.


ಮುಖ್ಯ ಅತಿಥಿಗಳಾಗಿ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಸದಸ್ಯ ಡಾ. ಅತುಲ್ ಕುಮಾರ್ ಶೆಟ್ಟಿ, ಜಿಲ್ಲಾ ಸಂಘಟನೆಯ ಸಂಚಾಲಕ ಸುರೇಶ್ ಹಕ್ಲಾಡಿ, ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಮಹಿಳಾ ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ಗೀತಾ ಸುರೇಶ್, ಇಡೂರು ಗ್ರಾಮ ಪಂಚಾಯತ್ ನಿಕಟಪೂರ್ವ ಅಧ್ಯಕ್ಷೆ ಆಶಾ ಆಚಾರ್ಯ, ಚಿತ್ತೂರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷೆ ಜಯಂತಿ ಪೂಜಾರ್ತಿ, ಚಿತ್ತೂರು ಗ್ರಾಮ ಪಂಚಾಯತ್ ನಿಕಟಪೂರ್ವ ಉಪಾಧ್ಯಕ್ಷೆ ಶ್ರೀಮತಿ ಸುಬ್ಬು, ತಾಲೂಕು ಸಂಘದ ಕಾರ್ಯಕಾರಿ ಸಮಿತಿ ಸದಸ್ಯ ಸೂರ ನೈಕಂಬಳಿ, ಚಿತ್ತೂರು ದಸಂಸ ಮಹಿಳಾ ಘಟಕದ ಸಂಚಾಲಕಿ ಶ್ರೀಮತಿ ಜಯ ಮಾರಣಕಟ್ಟೆ, ಕೋಶಾಧಿಕಾರಿ ಚಿಕ್ಕು ನೈಕಂಬಳಿ ಭಾಗವಹಿಸಿದ್ದರು.
ಸಮಾರಂಭದಲ್ಲಿ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಮಾಜಿ ಧರ್ಮದರ್ಶಿ ವಂಡಬಳ್ಳಿ ಜಯರಾಮ ಶೆಟ್ಟಿ, ತಾಲೂಕು ಪಂಚಾಯತ್ ಮಾಜಿ ಸದಸ್ಯ ಉದಯ ಜಿ.ಪೂಜಾರಿ, ಚಿತ್ತೂರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ರವೀಂದ್ರ ಶೆಟ್ಟಿ, ನಾಗರಾಜ ಹರ್ಕೂರು, ಸಮೀಕ್ಷಾ ಸುರೇಶ್ ಹಕ್ಲಾಡಿ ಹಾಗೂ ಸನ್ಮಾನಿಸಲಾಯಿತು. ಅಂಬೇಡ್ಕರ್ ಭವನಕ್ಕೆ ದೇಣಿಗೆ ನೀಡಿದವರನ್ನು ಗೌರವಿಸಲಾಯಿತು.
ಸಮಾರಂಭದಲ್ಲಿ ಅಶಕ್ತರಿಗೆ ನೆರವು ಹಸ್ತಾಂತರಿಸಲಾಯಿತು. ಸಮ್ಮಾನ ಪತ್ರಗಳನ್ನು ಸಾಕ್ಷಿ ಮುಳ್ಳಿಕಟ್ಟೆ, ಚಂದನ ಬಿ. ಕುಂಟೋಳಿ ವಾಚಿಸಿದರು. ಸಂವಿಧಾನ ಪೀಠಿಕೆಯನ್ನು ಶ್ರೀನಿಧಿ ನೈಕಂಬಳಿ ವಾಚಿಸಿದರು. ಶ್ರೀಮತಿ ಭಾಗೀರಥಿ ಸ್ವಾಗತಿಸಿದರು. ಚಿತ್ತೂರು ಗ್ರಾಮ ಶಾಖೆಯ ಪ್ರಧಾನ ಸಂಚಾಲಕ ಶ್ರೀಕಾಂತ್ ಹಿಜಾಣ ವಂದಿಸಿದರು. ಶಂಭು ಗುಡ್ಡಮ್ಮಾಡಿ ಹಾಗೂ ಚೈತ್ರ ಯಡ್ತರೆ ನಿರೂಪಿಸಿದರು.

administrator

Related Articles

Leave a Reply

Your email address will not be published. Required fields are marked *

You cannot copy content of this page