ಉಡುಪಿ ಮಿತ್ರ ಪತ್ರಿಕೆ ಸುದ್ಧಿ:
ವರದಿ : ಚಿತ್ತೂರು ಪ್ರಭಾಕರ ಆಚಾರ್ಯ
ಬ್ರಹ್ಮಾವರ, ಎ.23: ಇಲ್ಲಿನ ನಿರ್ಮಲ ಆಂಗ್ಲ ಮಾಧ್ಯಮ ಶಾಲೆಯ 2025-26ನೇ ಸಾಲಿನ ಪರೀಕ್ಷೆಯಲ್ಲಿ ಎಸ್.ಎಸ್.ಎಲ್.ಸಿ.ವಿದ್ಯಾರ್ಥಿಗಳು ಶೇ.100 ಫಲಿತಾಂಶ ದಾಖಲಿಸಿದ್ದಾರೆ. ಈ ಎ ಗ್ರೇಡ್ ಇಂಗ್ಲೀಷ್ ಮೀಡಿಯಂ ಶಾಲೆ ಪ್ರತೀ ವರ್ಷ ಉತ್ತಮ ಫಲಿತಾಂಶ ದಾಖಲಿಸುತ್ತಾ ಬಂದಿದೆ. ಈ ಬಾರಿ 50 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 30 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ಹಾಗೂ 20 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಪಾಸಾಗಿರುತ್ತಾರೆ.

ಪ್ರಥಮ ಆಚಾರ್ಯ 597 ಅಂಕಗಳನ್ನು ಗಳಿಸಿ ತರಗತಿಗೆ ಪ್ರಥಮ ಸ್ಥಾನಿಯಾಗಿದ್ದು ಮಾನವಿ 595 ಪಡೆದು ದ್ವಿತೀಯ ಸ್ಥಾನಿಯಾಗಿದ್ದು ವೈಷ್ಣವಿ ನಾಯ್ಕ್ 594 ಅಂಕಗಳನ್ನು ಪಡೆದು ತೃತೀಯ ಸ್ಥಾನಿಯಾಗಿರುತ್ತಾರೆ.

ಶೇ.100 ಫಲಿತಾಂಶ ದಾಖಲಿಸಿದ ವಿದ್ಯಾರ್ಥಿಗಳನ್ನು ಸಂಸ್ಥೆಯ ಜಂಟಿ ಕಾರ್ಯಕರ್ಶಿ ರೆ|ಫಾ|ಜಾನ್ ಫೆರ್ನಾಂಡಿಸ್, ಪ್ರಾಂಶುಪಾಲರಾದ ರೆ| ಫಾ| ಮಥಾಯಸ್ ಡಯಾಸ್, ಪಿಟಿಎ ಕಮಿಟಿ ಅಧ್ಯಕ್ಷರು, ಸದಸ್ಯರು, ಶಿಕ್ಷಕರು, ಶಿಕ್ಷಕೇತರ ಸಿಬ್ಬಂದಿಗಳು ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ.



