udupimitra.in
  • July 2, 2026
  • Last Update July 2, 2026 4:44 pm
  • Brahmavara

9ನೇ ತರಗತಿ ವಿದ್ಯಾರ್ಥಿ ಅಪಹರಣ ಪ್ರಕರಣ: ಇಬ್ಬರು ಆರೋಪಿಗಳು ಪೊಲೀಸರ ಬಲೆಗೆ

9ನೇ ತರಗತಿ ವಿದ್ಯಾರ್ಥಿ ಅಪಹರಣ ಪ್ರಕರಣ: ಇಬ್ಬರು ಆರೋಪಿಗಳು ಪೊಲೀಸರ ಬಲೆಗೆ

ಉಡುಪಿಮಿತ್ರ ಪತ್ರಿಕೆ ಸುದ್ಧಿ :
ಬ್ರಹ್ಮಾವರ, ಜು. ೧: ಅಪ್ರಾಪ್ತ ಬಾಲಕನನ್ನು ಅಪಹರಿಸಿ ಕೇರಳಕ್ಕೆ ಕರೆದೊಯ್ದು ಬಲವಂತವಾಗಿ ಕೆಲಸಕ್ಕೆ ಸೇರಿಸಿದ ಆರೋಪದಡಿ ಬ್ರಹ್ಮಾವರ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.


ಬ್ರಹ್ಮಾವರ ತಾಲೂಕಿನ ಮಟಪಾಡಿ ಗ್ರಾಮದ ತಾರೇಶ್ (೩೮) ಅವರು ನೀಡಿದ ದೂರಿನಂತೆ, ಅವರ ಪುತ್ರ ಬ್ರಹ್ಮಾವರದ ಪ್ರೌಢಶಾಲೆಯೊಂದರಲ್ಲಿ ೯ನೇ ತರಗತಿಯಲ್ಲಿ ಓದುತ್ತಿದ್ದು ಜೂನ್ ೧ರಂದು ಬೆಳಿಗ್ಗೆ ಬ್ರಹ್ಮಾವರ ಬಸ್ ನಿಲ್ದಾಣದಿಂದ ಆರೋಪಿಗಳು ಅಪಹರಿಸಿ ಕೇರಳ ರಾಜ್ಯದ ತಲಪಾಡಿ ಸಮೀಪದ ಕುಂಜತ್ತೂರು ಪದವು ಪ್ರದೇಶದಲ್ಲಿರುವ ವುಡ್ ಕಂಪನಿಗೆ ಬಲವಂತವಾಗಿ ಕರೆದುಕೊಂಡು ಹೋಗಿ ಕೆಲಸಕ್ಕೆ ಸೇರಿಸಿದ್ದರು ಎನ್ನಲಾಗಿದೆ.
ಮನೆಗೆ ತೆರಳಲು ಬಾಲಕ ಮನವಿ ಮಾಡಿದರೂ ಆರೋಪಿಗಳು ಅವಕಾಶ ನೀಡದೆ, ಜೂನ್ ೯ರಂದು ವಾಸವಿದ್ದ ಕೋಣೆಯಲ್ಲಿ ಸುಚಿತ್ ಎಂಬಾತ ವೈರ್‌ನಿಂದ ಹಲ್ಲೆ ನಡೆಸಿದ್ದು, ವಿಖ್ಯಾತ್ ಚೂರಿ ತೋರಿಸಿ ಈ ವಿಷಯವನ್ನು ಯಾರಿಗಾದರೂ ತಿಳಿಸಿದರೆ ಕೊಲೆ ಮಾಡುವುದಾಗಿ ಜೀವ ಬೆದರಿಕೆ ಹಾಕಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಈ ಘಟನೆಯನ್ನು ಇನ್ನೊಬ್ಬ ಆರೋಪಿ (ಬಾಲಾಪರಾಧಿ)ಮೊಬೈಲ್‌ನಲ್ಲಿ ವೀಡಿಯೊ ಚಿತ್ರೀಕರಿಸಿದ್ದಾನೆ ಎಂದು ತಿಳಿಸಲಾಗಿದೆ.
ಈ ಸಂಬಂಧ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ವಿವಿಧ ಭಾರತೀಯ ನ್ಯಾಯ ಸಂಹಿತೆ (ಃಓS) ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ಪ್ರಕರಣದ ಆರೋಪಿಗಳಾದ ವಿಖ್ಯಾತ್ ಆಚಾರ್ಯ (೧೯) ಹಾಗೂ ಸುಚಿತ್ ನಾಯಕ್ (೨೦) ಅವರನ್ನು ಪೊಲೀಸರು ಬಂಧಿಸಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಲಾಗುತ್ತಿದೆ. ಮೂರನೇ ಆರೋಪಿ ಬಾಲಾಪರಾಧಿಯಾಗಿರುವುದರಿಂದ ಆತನನ್ನು ಬಾಲ ನ್ಯಾಯ ಮಂಡಳಿಯ ಮುಂದೆ ಹಾಜರುಪಡಿಸಲಾಗಿದೆ.

administrator

Related Articles

Leave a Reply

Your email address will not be published. Required fields are marked *

You cannot copy content of this page