udupimitra.in
  • July 29, 2026
  • Last Update July 29, 2026 6:09 pm
  • Brahmavara

ಅ.2ರಂದು ಕುಂದಾಪುರ ತಾಲೂಕು ಚಿನ್ನ ಬೆಳ್ಳಿ ಕೆಲಸಗಾರರ ಸಂಘ (ರಿ.) 18ನೇ ವಾರ್ಷಿಕೋತ್ಸವ

ಅ.2ರಂದು ಕುಂದಾಪುರ ತಾಲೂಕು ಚಿನ್ನ ಬೆಳ್ಳಿ ಕೆಲಸಗಾರರ ಸಂಘ (ರಿ.) 18ನೇ ವಾರ್ಷಿಕೋತ್ಸವ

ಉಡುಪಿಮಿತ್ರ ಪತ್ರಿಕೆ ಸುದ್ಧಿ :
ಕುಂದಾಪುರ, ಜು.29: ಕುಂದಾಪುರ ತಾಲೂಕು ಚಿನ್ನ ಬೆಳ್ಳಿ ಕೆಲಸಗಾರರ ಸಂಘ (ರಿ.) 18ನೇ ವಾರ್ಷಿಕೋತ್ಸವ ಸಮಾರಂಭ ಅಗಸ್ಟ್ ೨ರಂದು ಕುಂದಾಪುರ ವಿಶ್ವಬ್ರಾಹ್ಮಣ ಸಮಾಜ ಸೇವಾ ಸಂಘ(ರಿ.) ಕುಂದಾಪುರ ಇಲ್ಲಿ ನಡೆಯಲಿದ್ದು ಸಂಘದ ಸರ್ವ ಸದಸ್ಯರು ಭಾಗವಹಿಸುವಂತೆ ಸಂಘದ ಅಧ್ಯಕ್ಷ ಬಿ.ಕುಶ ಕುಮಾರ್ ಕೋರಿಕೊಂಡಿದ್ದಾರೆ.
ವಾರ್ಷಿಕೋತ್ಸವದ ಅಂಗವಾಗಿ ಬೆಳಿಗ್ಗೆ 9.00ರಿಂದ ಸಂಘದ ಸದಸ್ಯರಿಗೆ ಮನೋರಂಜನಾ ಕ್ರೀಡಾಕೂಟ, ಸಂಘದ ಸದಸ್ಯರ ಮಕ್ಕಳಿಗೆ ಚಿತ್ರ ಬಿಡಿಸುವ ಸ್ಪರ್ಧೆ, ಸಾಂಸ್ಕೃತಿಕ ಕಾರ್ಯಕ್ರಮ, ಪ್ರತಿಭಾ ಪುರಸ್ಕಾರ, ಗೌರವ ಸನ್ಮಾನ, ಪುಸ್ತಕ ವಿತರಣೆ ನಡೆಯಲಿದೆ.
ಸಭಾ ಕಾರ್ಯಕ್ರಮವನ್ನು ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಕಿರಣ್ ಕುಮಾರ್ ಕೊಡ್ಗಿ ನೆರವೇರಿಸಲಿದ್ದು ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಬಿ.ಕುಶ ಕುಮಾರ್ ವಹಿಸಿಕೊಳ್ಳಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಕರ್ನಾಟಕ ರಾಜ್ಯ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮ ನಿ.ಬೆಂಗಳೂರು ಇದರ ಅಧ್ಯಕ್ಷ ಪಿ.ಸುಜ್ಞಾನಮೂರ್ತಿ, ಬಾರಕೂರು ಶ್ರೀ ಕಾಳಿಕಾಂಬಾ ದೇವಸ್ಥಾನದ ಆಡಳಿತ ಮೊಕ್ತೇಸರ ವಿ.ಶ್ರೀಧರ ಆಚಾರ್ಯ ವಡೇರಹೋಬಳಿ, ಓಎನ್‌ಜಿಸಿ ಮುಂಬಯಿ ಇದರ ವಿಶ್ರಾಂತ ಮುಖ್ಯ ಮಹಾಪ್ರಬಂಧಕ ಬನ್ನಾಡಿ ನಾರಾಯಣ ಆಚಾರ್ಯ, ಕೋಟ ವಿವೇಕ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಶ್ರೀಮತಿ ಪ್ರೀತಿ ರೇಖಾ, ಕುಂದಾಪುರ ತಾಲೂಕು ಜ್ಯುವೆಲ್ಲರಿ ಅಸೋಸಿಯೇಶನ್ ಅಧ್ಯಕ್ಷ ವೆಂಕಟೇಶ್ ಶೇಟ್, ಉಡುಪಿ ಜಿಲ್ಲಾ ಚಿನ್ನ ಬೆಳ್ಳಿ ಕೆಲಸಗಾರರ ಸಂಘ (ರಿ.)ದ ಅಧ್ಯಕ್ಷ ರವಿಚಂದ್ರ ಆಚಾರ್ಯ ಮಾರಾಳಿ, ಕುಂದಾಪುರ ತಾಲೂಕು ಚಿನ್ನ-ಬೆಳ್ಳಿ ಕೆಲಸಗಾರರ ಸಂಘದ ಗೌರವಾಧ್ಯಕ್ಷ ರಾಜೇಶ್ ಆಚಾರ್ಯ ಮರವಂತೆ, ಕುಂದಾಪುರ ತಾಲೂಕು ಚಿನ್ನ ಬೆಳ್ಳಿ ಕೆಲಸಗಾರರ ಸಂಘದ ನೂತನ ಅಧ್ಯಕ್ಷ ಕೃಷ್ಣ ಆಚಾರ್ಯ ಓಂಕಾರ್ ಕೋಟ, ಪ್ರಧಾನ ಕಾರ್ಯದರ್ಶಿ ಕೃಷ್ಣ ಆಚಾರ್ಯ ಕಟ್ಕೆರೆ, ಕೋಶಾಧಿಕಾರಿ ರಘುನಾಥ್ ಶೇಟ್ ಭಾಗವಹಿಸಲಿದ್ದಾರೆ.
ಈ ಕಾರ್ಯಕ್ರಮಕ್ಕೆ ಸಂಘದ ಎಲ್ಲಾ ಸದಸ್ಯರು ಬೆಳಿಗ್ಗೆಯಿಂದಲೇ ತಪ್ಪದೆ ಹಾಜರಿರುವಂತೆ ಅಧ್ಯಕ್ಷರು ಕೋರಿಕೊಂಡಿದ್ದಾರೆ.

administrator

Related Articles

Leave a Reply

Your email address will not be published. Required fields are marked *

You cannot copy content of this page