ಉಡುಪಿಮಿತ್ರ ಪತ್ರಿಕೆ ಸುದ್ಧಿ :
ಬ್ರಹ್ಮಾವರ, ಅ.೩ : ಹವಾಮಾನ ಇಲಾಖೆಯ ಮಳೆಯ ತೀವ್ರತೆ ಹೆಚ್ಚಿರುವುದರಿಂದ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ದಿನಾಂಕ 04.08.2026 ಮಂಗಳವಾರದಂದು ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರಕಾರಿ, ಅನುದಾನಿತ, ಖಾಸಗಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಜಿಲ್ಲಾಧಿಕಾರಿಯವರು ರಜೆ ಘೋಷಿಸಿದ್ದಾರೆ.

ಎಲ್ಲಾ ಪದವಿ ಪೂರ್ವ, ಐಟಿಐ, ಡಿಪ್ಲೋಮಾ, ಪದವಿ, ಸ್ನಾತಕೋತ್ತರ ಪದವಿ ಹಾಗೂ ಇಂಜೀನಿಯರಿಂಗ್ ವಿದ್ಯಾರ್ಥಿಗಳಿಗೆ ರಜೆ ಘೋಷಿಸಿರುವುದಿಲ್ಲ.
. ಕಾಲೇಜು ಮುಖ್ಯಸ್ಥರು ವಿದ್ಯಾರ್ಥಿಗಳು ಕಾಲೇಜಿಗೆ ಆಗಮಿಸುವಾಗ ಹಾಗೂ ಮನೆಗೆ ತೆರಳುವ ಸಂಧರ್ಭದಲ್ಲಿ ಯಾವುದೇ ಅಪಾಯವಿಲ್ಲದೇ ಸುರಕ್ಷಿತವಾಗಿ ತಲುಪುವ ಬಗ್ಗೆ ಗಮನ ಹರಿಸಬೇಕು. ತೋಡು, ಹಳ್ಳಗಳನ್ನು ದಾಟಿ ಬರುವ ಸಂದರ್ಭಗಳು ಇರುವಂತಹ ವಿದ್ಯಾರ್ಥಿಗಳಿಗೆ ಮನೆಯಲ್ಲಿಯೇ ಸುರಕ್ಷಿತವಾಗಿ ಇರುವಂತೆ ಸೂಚಿಸಬೇಕು. ಶಿಥಿಲ ಕಟ್ಟಡಗಳು ಇದ್ದಲ್ಲಿ ಅಂತಹ ಕಟ್ಟಡಗಳನ್ನು ಪಾಠ ಪ್ರವಚನಗಳಿಗೆ ಬಳಸಬಾರದು. ವಿದ್ಯಾರ್ಥಿಗಳ ಪೋಷಕರು/ಕಾಲೇಜು ಮುಖ್ಯಸ್ಥರು, ವಿದ್ಯಾರ್ಥಿಗಳು ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿ ತೀರ ಸಮುದ್ರ ತೀರಕ್ಕೆ ಹೋಗದಂತೆ ಜಾಗ್ರತೆ ವಹಿಸಬೇಕು. ವಿದ್ಯಾರ್ಥಿಗಳು ಕಾಲೇಜುಗಳಿಗೆ ಹೋಗುವ ವಾಹನಗಳ ಸುರಕ್ಷತೆಯನ್ನು ನೋಡಿಕೊಳ್ಳಬೇಕು. ಕಾಲೇಜುಗಳಲ್ಲಿ ಪ್ರಾಕೃತಿಕ ವಿಕೋಪ ನಿಭಾಯಿಸುವ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿಯನ್ನು ನೀಡಬೇಕು. ಈಗ ಮಳೆಗಾಗಿ, ಮುಂಜಾಗೃತ ಕ್ರಮವಾಗಿ ರಜೆಯನ್ನು ನೀಡಿ ಉಂಟಾಗಿರುವ ಕಲಿಕಾ ಸಮಯದ ಕೊರತೆಯನ್ನು ಶನಿವಾರ ಮಧ್ಯಾಹ್ನ ಅಥವಾ ಭಾನುವಾರಗಳಂದು ಹೆಚ್ಚುವರಿ ತರಗತಿಗಳನ್ನು ನಡೆಸಬೇಕು. ಪ್ರಾಕೃತಿಕ ವಿಕೋಪ ಸಂಬಂಧಿಸಿದ ಯಾವುದೇ ಸಮಸ್ಯೆಗಳ ತುರ್ತು ಸೇವೆಗೆ 0820-2574802-DC office, 0820-2520417-Udupi taluk, 08258-230201-Karkala taluk, 08254-230357-Kundapura ಸಂಪರ್ಕಿಸಬೇಕೆಂದು ಜಿಲ್ಲಾಧಿಕಾರಿಯವರು ಸೂಚಿಸಿದ್ದಾರೆ.




