udupimitra.in
  • October 2, 2026
  • Last Update October 2, 2026 2:47 pm
  • Brahmavara

ಸುಜ್ಞಾನ ಎಜುಕೇಶನಲ್ ಟ್ರಸ್ಟ್ ; ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

ಸುಜ್ಞಾನ ಎಜುಕೇಶನಲ್ ಟ್ರಸ್ಟ್ ; ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

ಉಡುಪಿಮಿತ್ರ ಪತ್ರಿಕೆ ಸುದ್ಧಿ:

ಕುಂದಾಪುರ: ಇಲ್ಲಿನ ಸುಜ್ಞಾನ ಎಜುಕೇಶನಲ್ ಟ್ರಸ್ಟ್ ವತಿಯಿಂದ ವಿದ್ಯಾರಣ್ಯ ಇಂಗ್ಲಿಷ್ ಮೀಡಿಯಂ ಸ್ಕೂಲ್ ಹಾಗೂ ವಿದ್ಯಾರಣ್ಯ ಗ್ಲೋಬಲ್ ಸ್ಕೂಲ್ ಕ್ಯಾಂಪಸ್‌ನಲ್ಲಿ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜಯಂತಿಯನ್ನು ಸ್ವಚ್ಛತಾ ಅಭಿಯಾನದ ಮೂಲಕ ಅರ್ಥಪೂರ್ಣವಾಗಿ ಆಚರಿಸಲಾಯಿತು.

ಕಾರ್ಯಕ್ರಮದ ಆರಂಭದಲ್ಲಿ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಯವರ ಭಾವಚಿತ್ರಗಳಿಗೆ ಪುಷ್ಪಾರ್ಚನೆ ಸಲ್ಲಿಸಿ ಗೌರವ ನಮನಗಳನ್ನು ಸಲ್ಲಿಸಲಾಯಿತು.

ವಿದ್ಯಾರ್ಥಿಗಳು ಗಾಂಧೀಜಿ ಹಾಗೂ ಶಾಸ್ತ್ರಿಜಿಯವರ ಸರಳತೆ, ಸತ್ಯ, ಅಹಿಂಸೆ ಹಾಗೂ ಶಿಸ್ತಿನಂತಹ ಮಹೋನ್ನತ ಜೀವನ ಮೌಲ್ಯಗಳನ್ನು ತಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು ಎಂದು ಈ ಸಂದರ್ಭದಲ್ಲಿ ಕರೆ ನೀಡಲಾಯಿತು.

ಅತಿಥಿಗಳಾಗಿ ಆಗಮಿಸಿದ್ದ ಯಡಾಡಿ-ಮತ್ಯಾಡಿ ಗ್ರಾಮ ಪಂಚಾಯಿತಿಯ ಅಭಿವೃದ್ಧಿ ಅಧಿಕಾರಿ ಮಧುಸೂದನ್ ಪ್ರಸಾದ್ ಅವರು ಮಾತನಾಡಿ, “ದಿನಾಚರಣೆಯ ಮಹತ್ವವನ್ನು ಪ್ರತಿಯೊಬ್ಬರೂ ಅರಿಯಬೇಕು. ಸ್ವಚ್ಛ ಪರಿಸರವನ್ನು ನಿರ್ಮಿಸುವುದು ಪ್ರತಿಯೊಬ್ಬ ಪ್ರಜೆಯ ಜವಾಬ್ದಾರಿಯಾಗಿದ್ದು, ಸ್ವಚ್ಛತೆಯನ್ನು ಪ್ರತಿಯೊಬ್ಬರೂ ತಮ್ಮ ದೈನಂದಿನ ಜೀವನದ ಒಂದು ಭಾಗವನ್ನಾಗಿ ಮಾಡಿಕೊಳ್ಳಬೇಕು,” ಎಂದು ಸಂದೇಶ ನೀಡಿದರು.

ಸಮಾಜ ವಿಜ್ಞಾನ ಶಿಕ್ಷಕಿ ಶ್ರೀಮತಿ ಪ್ರೀತಿ ಅವರು ಮಾತನಾಡಿ, ಗಾಂಧಿ ಜಯಂತಿಯ ಆಚರಣೆಯ ಹಿನ್ನೆಲೆ ಮತ್ತು ಮಹತ್ವವನ್ನು ವಿವರಿಸಿದರು. ವಿದ್ಯಾರ್ಥಿಗಳಲ್ಲಿ ದೇಶಪ್ರೇಮ, ಸತ್ಯ, ಅಹಿಂಸೆ, ಶಿಸ್ತು ಹಾಗೂ ಉತ್ತಮ ಜೀವನ ಮೌಲ್ಯಗಳ ಕುರಿತು ಅರಿವು ಮೂಡಿಸಿದರು.

ದಿನಾಚರಣೆಯ ಅಂಗವಾಗಿ ಗುಡ್ಡೆಯಂಗಡಿ ಪೇಟೆಯಿಂದ ಜನಜಾಗೃತಿ ಜಾಥಾ ಮತ್ತು ಸ್ವಚ್ಛತಾ ಅಭಿಯಾನವನ್ನು ಹಮ್ಮಿಕೊಳ್ಳಲಾಗಿತ್ತು. ಈ ಅಭಿಯಾನಕ್ಕೆ ‘ಕಟಿಲೇಶ್ವರಿ ಡೆವಲಪರ್ಸ್’ನ ಮ್ಯಾನೇಜಿಂಗ್ ಡೈರೆಕ್ಟರ್ ಪ್ರಕಾಶ್ ಶೆಟ್ಟಿ ಅವರು ಚಾಲನೆ ನೀಡಿದರು.

ಕಾರ್ಯಕ್ರಮದಲ್ಲಿ ಸುಜ್ಞಾನ ಎಜುಕೇಶನಲ್ ಟ್ರಸ್ಟ್‌ನ ಅಧ್ಯಕ್ಷರಾದ ಡಾ. ರಮೇಶ್ ಶೆಟ್ಟಿ, ಕಾರ್ಯದರ್ಶಿ ಪ್ರತಾಪ್ ಚಂದ್ರ ಶೆಟ್ಟಿ, ಖಜಾಂಚಿ ಭರತ್ ಶೆಟ್ಟಿ ಹಾಗೂ ಸುಜ್ಞಾನ ಪಿಯು ಕಾಲೇಜಿನ ಪ್ರಾಂಶುಪಾಲರಾದ ರಂಜನ್ ಬಿ‌ ಶೆಟ್ಟಿ, ವಿದ್ಯಾರಣ್ಯ ಆಂಗ್ಲಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯರಾದ ಪ್ರದೀಪ್ ಕುಮಾರ್, ವಿದ್ಯಾರಣ್ಯ ಗ್ಲೋಬಲ್ ಸ್ಕೂಲ್ ನ ಪ್ರಾಂಶುಪಾಲರಾದ ಅನಿತಾ ಕುಮಾರಿ,ಉಪಪ್ರಾಂಶುಪಾಲರಾದ ಸ್ಪೂರ್ತಿ ಎ ಉಪಸ್ಥಿತರಿದ್ದರು.
ಸಂಸ್ಕೃತ ಉಪನ್ಯಾಸಕರಾದ ರಜತ್ ಭಟ್ ಅವರು ಕಾರ್ಯಕ್ರಮವನ್ನು ನಿರೂಪಿಸಿದರು.

administrator

Related Articles

Leave a Reply

Your email address will not be published. Required fields are marked *

You cannot copy content of this page