udupimitra.in
  • October 24, 2026
  • Last Update October 23, 2026 5:29 pm
  • Brahmavara

ಯಡಾಡಿ ಮತ್ಯಾಡಿ : ಕುಂದಾಪುರ ವಲಯ ಮಟ್ಟದ ಕ್ರೀಡಾಕೂಟ ಉದ್ಘಾಟನೆ

ಯಡಾಡಿ ಮತ್ಯಾಡಿ : ಕುಂದಾಪುರ ವಲಯ ಮಟ್ಟದ ಕ್ರೀಡಾಕೂಟ ಉದ್ಘಾಟನೆ

ವರದಿ : ಚಿತ್ತೂರು ಪ್ರಭಾಕರ ಆಚಾರ್ಯ
ಉಡುಪಿ ಮಿತ್ರ ಪತ್ರಿಕೆ ಸುದ್ಧಿ :
ಬ್ರಹ್ಮಾವರ, ಅ.೨೩: ವಿದ್ಯಾರಣ್ಯ ಸಂಸ್ಥೆ ಅದ್ಭುತವಾಗಿ ಬೆಳೆದಿದೆ. ಯಾವುದೇ ಸಂಸ್ಥೆ ಸಾಧನೆ ಮಾಡಿದರೆ ಹೀಗೂ ಮಾಡಬಹುದು ಎಂಬುದನ್ನು ಡಾ.ರಮೇಶ್ ಶೆಟ್ಟಿ, ಭರತ್ ಕುಮಾರ್ ಶೆಟ್ಟಿಯವರ ತಂಡ ತೋರಿಸಿಕೊಟ್ಟಿದ್ದಾರೆ. ಉತ್ತಮ ಮೂಲಭೂತ ಸೌಕರ್ಯ ಒದಗಿಸಿದ್ದು ಎಲ್ಲಾ ಶಿಕ್ಷಣ ಸಂಸ್ಥೆಗಳು ಈ ಬೆಳವಣಿಗೆಯನ್ನು ಗಮನಿಸಬೇಕು ಎಂದು ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ. ಕಿರಣ್ ಕುಮಾರ್ ಕೊಡ್ಗಿಅವರು ಹೇಳಿದರು. ಅವರು ಅ.೨೩ ರಂದು ಯಡಾಡಿ ಮತ್ಯಾಡಿ ವಿದ್ಯಾರಣ್ಯ ಕ್ಯಾಂಪಸ್‌ನಲ್ಲಿ ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಕುಂದಾಪುರ ಹಾಗೂ ವಿದ್ಯಾರಣ್ಯ ಇಂಗ್ಲಿಷ್ ಮೀಡಿಯಂ ಸ್ಕೂಲ್ (ಸುಜ್ಞಾನ ಎಜುಕೇಶನಲ್ ಟ್ರಸ್ಟ್ (ರಿ.) ಕುಂದಾಪುರ) ವಿದ್ಯಾರಣ್ಯ ಕ್ಯಾಂಪಸ್ ಯಡಾಡಿ-ಮತ್ಯಾಡಿ ಇವುಗಳ ಜಂಟಿ ಆಶ್ರಯದಲ್ಲಿ ನಡೆದ ಕುಂದಾಪುರ ವಲಯ ಮಟ್ಟದ ೧೪ ಮತ್ತು ೧೭ ವರ್ಷದೊಳಗಿನ ಬಾಲಕ-ಬಾಲಕಿಯರ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದರು.


ಮಾಜಿ ಸಚಿವ ಕೆ. ಜಯಪ್ರಕಾಶ್ ಹೆಗ್ಡೆ ವಿದ್ಯಾರ್ಥಿಗಳ ಫುಡ್ ಫೆಸ್ಟ್ ಅನಾವರಣಗೊಳಿಸಿ ಮಾತನಾಡಿ ವಿದ್ಯಾರ್ಥಿಗಳಿಗೆ ಕ್ರೀಡೆ, ಕಲೆ, ಯಾವುದರಲ್ಲಿ ಆಸಕ್ತಿ ಇದೆಯೋ ಅದನ್ನು ಗಮನಿಸಿ ಶಿಕ್ಷಕರು ಮಕ್ಕಳ ಆಸಕ್ತಿಗೆ ಪೂರಕವಾಗಿ ತರಬೇತಿ ನೀಡಬೇಕು ಎಂದರು.


ಸುಜ್ಞಾನ ಎಜುಕೇಶನಲ್ ಟ್ರಸ್ಟ್ ಅಧ್ಯಕ್ಷ ಡಾ.ರಮೇಶ್ ಶೆಟ್ಟಿ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಕ್ರೀಡೆ ಜೀವನದ ಅವಿಭಾಜ್ಯ ಅಂಗ. ಕ್ರೀಡೆ ನಮಗೆ ಧೈರ್ಯ ನೀಡಲಿದೆ. ಕ್ರೀಡಾಂಗಣದ ಸೋಲು ಹಾಗೂ ಗೆಲುವು ಜೀವನದ ಪಾಠ ಕಲಿಸುತ್ತದೆ. ಕ್ರೀಡೆಗೆ ಖಾಸಗಿ ಉದ್ಯಮಿಗಳು ಕೂಡ ಸಹಕಾರ ನೀಡಿದಲ್ಲಿ ವಿದ್ಯಾರ್ಥಿಗಳು ಅಂತಾರಾಷ್ಟ್ರೀಯ ಮಟ್ಟದ ಸಾಧನೆ ಮಾಡಲಿದ್ದಾರೆ ಎಂದರು.


ಹೊಂಬಾಡಿ ಮಂಡಾಡಿ ಗ್ರಾಮ ಪಂಚಾಯತ್ ಇದರ ಮಾಜಿ ಉಪಾಧ್ಯಕ್ಷ ಬಿ.ಅರುಣ್ ಕುಮಾರ್ ಶೆಟ್ಟಿ ಬಲೂನ್ ಬಾನೆತ್ತರಕ್ಕೆ ಹಾರಿಸಿದರು. ಕುಂದಾಪುರ ತಾಲೂಕು ಗ್ಯಾರಂಟಿ ಅನುಷ್ಟಾನ ಸಮಿತಿ ಅಧ್ಯಕ್ಷ ಕಾನ್ಮಕ್ಕಿ ಹರಿಪ್ರಸಾದ್ ಶೆಟ್ಟಿ ಕ್ರೀಡಾ ಜ್ಯೋತಿ ಬೆಳಗಿದರು. ಗ್ರಾಮ ಪಂಚಾಯತ್ ಮಾಜಿ ಸದಸ್ಯ ಗಣೇಶ್ ಶೆಟ್ಟಿ ಹುಣ್ಸೆಮಕ್ಕಿ, ಸುಜ್ಞಾನ ಎಜುಕೇಶನಲ್ ಟ್ರಸ್ಟ್ ಕಾರ್ಯದರ್ಶಿ ಪ್ರತಾಪ್ ಚಂದ್ರ ಶೆಟ್ಟಿ , ಖಜಾಂಚಿ ಭರತ್‌ಕುಮಾರ್ ಶೆಟ್ಟಿ, ಅಕ್ಷರ ದಾಸೋಹದ ಸಹಾಯಕ ನಿರ್ದೇಶಕ ಚಂದ್ರ ನಾಯ್ಕ್,
ಸುಜ್ಞಾನ್ ಪಿಯು ಕಾಲೇಜಿನ ಪ್ರಾಂಶುಪಾಲ ರಂಜನ್ ಬಿ.ಶೆಟ್ಟಿ, ದೈಹಿಕ ಶಿಕ್ಷಣ ಪರಿವೀಕ್ಷಕ ಸತ್ಯನಾರಾಯಣ, ಕುಸುಮಾಕರ ಶೆಟ್ಟಿ, ಕಿಶನ್ ರಾಜ್ ಶೆಟ್ಟಿ, ಬಾಲಕೃಷ್ಣ ಶೆಟ್ಟಿ, ಉಷಾಲತಾ, ಚಂದ್ರಶೇಖರ ಶೆಟ್ಟಿ, ಉದಯ ಮಡಿವಾಳ, ಶೇಖರ ಪೂಜಾರಿ , ಪ್ರದೀಪ್ ಕುಮಾರ್ ಚಂದ್ರಶೇಖರ ಶೆಟ್ಟಿ, ವಿದ್ಯಾರಣ್ಯ ಅಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯ ಪ್ರದೀಪ್, ವಿದ್ಯಾರಣ್ಯ ಗ್ಲೋಬಲ್ ಆಂಗ್ಲ ಮಾಧ್ಯಮ ಶಾಲೆಯ ಪ್ರಾಂಶುಪಾಲೆ ಅನಿತಾ ಕುಮಾರಿ, ಉಪಪ್ರಾಂಶುಪಾಲೆ ಸ್ಫೂರ್ತಿ ಮತ್ತಿತರರು ಉಪಸ್ಥಿತರಿದ್ದರು.


ಇದೇ ಸಂದರ್ಭ ವಾಲಿಬಾಲ್‌ನಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿ ಶ್ರೀ ಹರಿ ಅವರನ್ನು ಗೌರವಿಸಲಾಯಿತು.
ಕ್ಷೇತ್ರ ಶಿಕ್ಷಣಾಧಿಕಾರಿ ಶೋಭಾ ಶೆಟ್ಟಿ ಸ್ವಾಗತಿಸಿದರು. ಸತ್ಯನಾರಾಯಣ ಜಿ ಪ್ರಾಸ್ತಾವನೆಗೈದು, ಲಾಸ್ಯ ಮಧ್ಯಸ್ಥ ಪ್ರತಿಜ್ಞಾ ವಿಧಿ ಬೋಧಿಸಿದರು. ದೈಹಿಕ ಶಿಕ್ಷಣ ಶಿಕ್ಷಕರಾದ ಚಂದ್ರಶೇಖರ ಬೀಜಾಡಿ ಹಾಗೂ ವಿಜಯ ಕುಮಾರ್ ಶೆಟ್ಟಿ ನಿರೂಪಿಸಿದರು. ಸಂಸ್ಕೃತ ಉಪನ್ಯಾಸಕ ರಜತ್ ಭಟ್ ವಂದಿಸಿದರು.
ವಿವಿಧ ವಿದ್ಯಾ ಸಂಸ್ಥೆಗಳಿಂದ ಅಗಮಿಸಿದ ಕ್ರೀಡಾಳುಗಳಿಂದ ನಡೆದ ಆಕರ್ಷಕ ಪಥಸಂಚಲನ ಎಲ್ಲರ ಗಮನ ಸೆಳೆಯಿತು.

administrator

Related Articles

Leave a Reply

Your email address will not be published. Required fields are marked *

You cannot copy content of this page