udupimitra.in
  • November 2, 2026
  • Last Update November 1, 2026 4:51 pm
  • Brahmavara

ಬಾರ್ಕೂರು ಪಂಚಲಿಂಗೇಶ್ವರ ದೇವಸ್ಥಾನಕ್ಕೆ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ರಿಜ್ವಾನ್ ಭೇಟಿ

ವರದಿ : ಚಿತ್ತೂರು ಪ್ರಭಾಕರ ಆಚಾರ್ಯ

ಉಡುಪಿಮಿತ್ರ ಪತ್ರಿಕೆ ಸುದ್ಧಿ :
ಬಾರಕೂರು, ನ.೧: ಬಾರ್ಕೂರು ಪಾರಂಪರಿಕ ತಾಣವಾಗಿ ಅಭಿವೃದ್ಧಿಯಾಗಬೇಕಾದರೆ ಪಾರಂಪರಿಕ ಪಟ್ಟಿಯಲ್ಲಿ ಸೇರ್ಪಡೆಗೊಂಡಿದೆಯೋ ಇಲ್ಲವೋ ಎನ್ನುವ ಬಗ್ಗೆ ಪರಿಶೀಲನೆಯಾಗಬೇಕಿದೆ ಈ ಬಗ್ಗೆ ಸಂಬಂಧಪಟ್ಟ ಇಲಾಖೆಯ ಮೂಲಕ ಮಾಹಿತಿ ಪಡೆಯಲಿದ್ದೇನೆ ಹಾಗೂ ಹಿಂದಿನ ಸಚಿವರು ಅಭಿವೃದ್ಧಿಗಾಗಿ ಕೈಗೊಂಡ ಪ್ರಕ್ರಿಯೆಗಳ ಬಗ್ಗೆ ಮಾಹಿತಿ ಪಡೆದು ಸಮಗ್ರ ಅಭಿವೃದ್ಧಿಗೆ ಸರಕಾರದ ಮಟ್ಟದಲ್ಲಿ ಪ್ರಯತ್ನಪಡಲಾಗುವುದು ಎಂದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ರಿಜ್ವಾನ್ ಅರ್ಷದ್ ಅವರು ಹೇಳಿದರು. ಅವರು ಬಾರಕೂರು ಕೋಟೆಕೇರಿ ದೇವಸ್ಥಾನಕ್ಕೆ ಭೇಟಿ ನೀಡಿ ಮಾತನಾಡಿದರು.


ಜಿಲ್ಲೆಯ ಅಭಿವೃದ್ಧಿಗಾಗಿ ಬೆಂಗಳೂರಿನಲ್ಲಿ ಎಲ್ಲಾ ಅಧಿಕಾರಿಗಳ ಹಾಗೂ ಜನಪ್ರತಿನಿಧಿಗಳ ಸಭೆಯನ್ನು ಕರೆಯಲಿದ್ದೇನೆ. ನನ್ನಿಂದ ಸಾಧ್ಯವಾದಷ್ಟು ಪ್ರಯತ್ನ ಮಾಡಲಿದ್ದೇನೆ. ನಿರ್ಲಕ್ಷ ಮಾಡುವುದಿಲ್ಲ. ಕೆಲಸ ಮಾಡಿದರೆ ನಮ್ಮ ಮನಸ್ಸಿಗೆ ನೆಮ್ಮದಿ ಇರುತ್ತೆ. ಜಾತಿ ಧರ್ಮ ಯಾವುದನ್ನು ನೋಡದೆ ಕೆಲಸ ಮಾಡುತ್ತಿದ್ದೇನೆ. ದೇಶದ ಸಂವಿದಾನದಲ್ಲಿ ಎಲ್ಲರೂ ಒಂದೆ. ಸಾರ್ವಜನಿಕ ಜೀವನದಲ್ಲಿ ಹೊರಗೆ ಬಂದಾಗ ನಾವೆಲ್ಲ ಭಾರತೀಯರು ಎಂಬುದನ್ನು ಎಲ್ಲರೂ ನೆನೆಪಿಟ್ಟುಕೊಳ್ಳಬೇಕು. ಒಂದು ಸಮಾಜಕ್ಕೆ ಇನ್ನೊಂದು ಸಮಾಜ ಕೈ ಜೋಡಿಸಿ ಮುಂದುವರಿಯಬೇಕು. ನಮ್ಮ ಪೂರ್ವಜರು ಉಳಿಸಿಕೊಂಡಿರುವ ಪ್ರೀತಿ ಬಾಂಧವ್ಯ ನಾವು ಕೂಡ ಉಳಿಸಿ ಬೆಳೆಸಿಕೊಂಡು ಹೋಗಬೇಕು ಎಂದರು.


ಪಂಚಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಸುಗ್ಗಿ ಸುಧಾಕರ ಶೆಟ್ಟಿ ಮಾತನಾಡಿ ಬಾರಕೂರಿನ ಅಭಿವೃದ್ಧಿಗೆ ಎಲ್ಲಾ ನಾಯಕ್ಕರನ್ನು ಈ ಭಾಗಕ್ಕೆ ಕರೆಸಿದ್ದೇವೆ. ಎಲ್ಲರೊಂದಾಗಿ ಬಾರಕೂರಿನ ಅಭಿವೃದ್ಧಿ ಮಾಡಬೇಕೆಂದು ಮನವಿ ಮಾಡಿದರು.


ಜಿ.ಪಂ. ಮಾಜಿ ಅಧ್ಯಕ್ಷ ಭುಜಂಗ ಶೆಟ್ಟಿ ಮಾತನಾಡಿ ಇತಿಹಾಸ ಪ್ರಸಿದ್ಧ ಬಾರ್ಕೂರನ್ನು ಎಲ್ಲಾ ನಾಯಕರು ನಿರ್ಲಕ್ಷ ಮಾಡಿದ್ದಾರೆ. ಮುಂದೆ ಎಲ್ಲಾ ನಾಯಕರು ಸೇರಿ ಅಭಿವೃದ್ಧಿ ಮಾಡುವಂತೆ ಕೋರಿಕೊಂಡರು.


ಕರಾವಳಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಂ.ಎ.ಗಪೂರ್, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ದಿನಕರ ಹೇರೂರು, ಸಹಾಯಕ ಅರಣ್ಯ ಅಧಿಕಾರಿ ಶಶಿಕಾಂತ್, ಪಂಚಲಿಂಗೇಶ್ವರ ಜೀರ್ಣೋದ್ಧಾರ ಸಮಿತಿಯ ಕಾರ್ಯಾಧ್ಯಕ್ಷ ಬಾರ್ಕೂರು ಶಾಂತಾರಾಮ ಶೆಟ್ಟಿ, ಉಪಾಧ್ಯಕ್ಷ ಕೆ.ಚಂದ್ರಶೇಖರ ಶೆಟ್ಟಿ, ಕಾರ್ಯದರ್ಶಿ ಶ್ರೀನಿವಾಸ್ ಶೆಟ್ಟಿ ಉಪಸ್ಥಿತರಿದ್ದರು.
ರಾಮಚಂದ್ರ ಕಾಮತ್ ಸ್ವಾಗತಿಸಿದರು. ಪತ್ರಕರ್ತ ಕೆ.ಸಿ.ರಾಜೇಶ್ ವಂದಿಸಿದರು.

administrator

Related Articles

Leave a Reply

Your email address will not be published. Required fields are marked *

You cannot copy content of this page