udupimitra.in
  • November 7, 2026
  • Last Update November 7, 2026 5:33 am
  • Brahmavara

ಹೆಮ್ಮಾಡಿಯಲ್ಲಿ ಜನತಾ ಪಿಯ ಕಾಲೇಜ್‌ನಲ್ಲಿ ಬಹುದೊಡ್ಡ ಶೈಕ್ಷಣಿಕ ಉತ್ಸವ ; ಶಿಕ್ಷಣ ಸಂಸ್ಥೆಗಳು ಮಕ್ಕಳಿಗೆ ವ್ಯವಹಾರ ಜ್ಞಾನ ಕಲಿಸಿಕೊಡಬೇಕು- ಆನಂದ ಸಿ.ಕುಂದರ್

ಹೆಮ್ಮಾಡಿಯಲ್ಲಿ ಜನತಾ ಪಿಯ ಕಾಲೇಜ್‌ನಲ್ಲಿ ಬಹುದೊಡ್ಡ ಶೈಕ್ಷಣಿಕ ಉತ್ಸವ ; ಶಿಕ್ಷಣ ಸಂಸ್ಥೆಗಳು ಮಕ್ಕಳಿಗೆ ವ್ಯವಹಾರ ಜ್ಞಾನ ಕಲಿಸಿಕೊಡಬೇಕು- ಆನಂದ ಸಿ.ಕುಂದರ್

ವರದಿ : ಚಿತ್ತೂರು ಪ್ರಭಾಕರ ಆಚಾರ್ಯ
ಉಡುಪಿಮಿತ್ರ ಪತ್ರಿಕೆ ಸುದ್ಧಿ :
ಹೆಮ್ಮಾಡಿ:
ಮಾನವೀಯ ಮೌಲ್ಯದ ವಿದ್ಯಾರ್ಥಿ ಭವಿಷ್ಯದಲ್ಲಿ ಉತ್ತಮ ಮನುಷ್ಯನಾಗಿ ಬಾಳುತ್ತಾನೆ. ಶಿಕ್ಷಣ ಸಂಸ್ಥೆಗಳು ಮಾನವೀಯ ಮೌಲ್ಯದ ಜೊತೆಗೆ ವ್ಯವಹಾರ ಜ್ಞಾನವನ್ನು ಮಕ್ಕಳಿಗೆ ಕಲಿಸಿಕೊಡಬೇಕು. ನಿರುದ್ಯೋಗ ಸಮಸ್ಯೆ ನಿವಾರಿಸುವ ನಿಟ್ಟಿನಲ್ಲಿ ಭವಿಷ್ಯದಲ್ಲಿ ಸ್ವಂತ ಉದ್ದಿಮೆ ಆರಂಭಿಸಲು ಪ್ರೇರಣೆ ನೀಡಬೇಕು ಎಂದು ಗೀತಾನಂದ ಫೌಂಡೇಶನ್ ಪ್ರವರ್ತಕ ಆನಂದ ಸಿ. ಕುಂದರ್ ಹೇಳಿದರು.

ಅವರು ಹೆಮ್ಮಾಡಿಯ ಜನತಾ ಪ್ರ.ಪೂ. ಕಾಲೇಜಿನಲ್ಲಿ ನಡೆದ ವಿಜ್ಞಾನ ಜನತಾ ಆವಿಷ್ಕಾರ್ ೨೦೨೬ – ವ್ಯವಹಾರ ವ್ಯವಹಾರ, ಸಾಂಸ್ಕೃತಿಕ ಸಂಗಮವಾದ ಮೇಳವನ್ನು ಉದ್ಘಾಟಿಸಿ, ಮಾತನಾಡಿದರು.
ಐಪಿಎಸ್, ಐಎಎಸ್ ಹಾಗೂ ಇನ್ನಿತರ ಕಾಂಪಿಟೇಟಿವ್ ಎಕ್ಸಮ್‌ಗೆ ಉಡುಪಿ ದ.ಕ ಜಿಲ್ಲೆಯ ಮಕ್ಕಳು ಭಾಗವಹಿಸುತ್ತಿಲ್ಲ.
ಶಿಕ್ಷಣ ಸಂಸ್ಥೆಗಳು ಭಾಗವಹಿಸಲು ಪ್ರೇರೇಪಿಸಬೇಕು. ವಿದ್ಯಾಭ್ಯಾಸ ಮುಗಿಸಿ ಹೊರಬರುವ ನಮ್ಮ ಮಕ್ಕಳ ಸ್ಥಿತಿ ನೀರಿನಿಂದ ತೆಗೆದ ಮೀನಿನಂತೆ ಆಗಬಾರದು.
ಆದ್ದರಿಂದಲೇ ಮಕ್ಕಳಿಗೆ ಹೇಗೆ ವ್ಯವಹಾರ ಮಾಡಬೇಕು ಎಂಬುದನ್ನು ತಿಳಿಸಿಕೊಡುವ ಕೆಲಸವನ್ನು ಜನತಾ ವಿದ್ಯಾ ಸಂಸ್ಥೆ ಮಾಡಿದೆ. ಪ್ರಾಂಶುಪಾಲ ಗಣೇಶ್ ಮೊಗವೀರರವರು ಹೆಮ್ಮಾಡಿಯಂತಹ ಹಳ್ಳಿಯಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣವನ್ನು ಸಂಸ್ಥೆ ಸ್ಥಾಪಿಸಿ ಉತ್ತಮ ಶಿಕ್ಷಣ ನೀಡುತ್ತಿದ್ದಾರೆ. ಉತ್ತಮ ಹಾಸ್ಟೆಲ್ ವ್ಯವಸ್ಥೆ ಮಾಡಿದ್ದಾರೆ ಎಂದರು.
ಬೈಂದೂರಿನ ಮಾಜಿ ಶಾಸಕ, ಶ್ರೀವಿ.ವಿ.ವಿ. ಮಂಡಳಿ ಹೆಮ್ಮಾಡಿ ಅಧ್ಯಕ್ಷ ಕೆ. ಗೋಪಾಲ ಪೂಜಾರಿ ವಿದ್ಯಾರ್ಥಿಗಳ ಮಳಿಗೆಗಳನ್ನು ಉದ್ಘಾಟಿಸಿದರು.


. ಅಧ್ಯಕ್ಷತೆಯನ್ನು ಸಂಸ್ಥೆಯ ಪ್ರಾಂಶುಪಾಲ ಗಣೇಶ್ ಮೊಗವೀರ ವಹಿಸಿದ್ದು ಅವರು ಮಾತನಾಡುತ್ತಾ ಮುಂಬರುವ ದಿನಗಳಲ್ಲಿ ವಾಣಿಜ್ಯ ವಿಭಾಗ ದೇಶವನ್ನು ಮುನ್ನಡೆಸಲಿದೆ ಅದಕ್ಕಾಗಿ ನಮ್ಮ ಮಕ್ಕಳನ್ನು ಸಿದ್ದಪಡಿಸುತ್ತಿದ್ದೇವೆ.ಅಲ್ಲದೆ ವಿದ್ಯಾರ್ಥಿಗಳು ಅಂಕ ಗಳಿಸುವುದು ಮಾತ್ರವಲ್ಲ. ಉತ್ತಮ ಸಮಾಜ ನಿರ್ಮಾಣದಲ್ಲಿ ಅವರ ಪಾತ್ರವೂ ಇರಬೇಕು ಅನ್ನುವ ನಿಟ್ಟಿನಲ್ಲಿ ಸರ್ವಾಂಗೀಣ ಶಿಕ್ಷಣವನ್ನು ಇಲ್ಲಿ ನೀಡುತ್ತಿದ್ದೇವೆ. ಈ
ವ್ಯವಹಾರ ಮೇಳವು ಜಿಲ್ಲೆಯ ದೊಡ್ಡ ಶೈಕ್ಷಣಿಕ ಉತ್ಸವವಾಗಿದೆ. ಸ್ವಾವಲಂಬಿ ಬದುಕು, ಉದ್ಯಮ ಕೌಶಲ, ಮಾರುಕಟ್ಟೆ ಅನುಭವ, ವ್ಯವಹಾರ ವಿಚಾರಗಳನ್ನು ತಿಳಿಸಲು ಈ ಮೇಳ ಆಯೋಜಿಸಲಾಗಿದೆ. ಇದು ೫ ನೇ ವರ್ಷದ ಕಾರ್ಯಕ್ರಮವಾಗಿದ್ದು ಇಂದಿನ ವ್ಯವಹಾರ ಮೇಳದಲ್ಲಿ ನಮ್ಮ ಸಂಸ್ಥೆಯ ಮಕ್ಕಳು ೧೫೦ ಸ್ಟಾಲ್ ತೆರೆದು ವ್ಯವಹಾರ ಮಾಡಿದ್ದಾರೆ ಎಂದರು
ಸ್ಥಳಿಯವಾಗಿ ಉತ್ತಮ ಹಾಸ್ಟೆಲ್ ಸೌಲಭ್ಯ ಸಿಗುವಂತಾಗಬೇಕೆಂಬ ಉದ್ದೇಶದಲ್ಲಿ ನಮ್ಮ ಸಂಸ್ಥೆಯಲ್ಲಿ ಮಕ್ಕಳಿಗಾಗಿ ಹೈಟೆಕ್ ಹಾಸ್ಟೆಲ್ ನಿರ್ಮಿಸಿದ್ದೇವೆ. ಮುಂದಿನ ದಿನಗಳಲ್ಲಿ ಬೈಂದೂರು ಕುಂದಾಪುರ ಭಾಗದಲ್ಲಿ ನಮ್ಮ ಸಂಸ್ಥೆಯ ಶಾಖೆ ತೆರೆಯಲಿದ್ದೇವೆ ಎಂದು ಗಣೇಶ ಮೊಗವೀರ ತಿಳಿಸಿದರು.

ಅಭಯ ಹಸ್ತ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ, ರಕ್ತದ ಆಪದ್ಭಾಂಧವ ಸತೀಶ್ ಸಾಲ್ಯಾನ್ ಮಣಿಪಾಲ.
ಜನಸೇವಾ ಟ್ರಸ್ಟ್ ಪ್ರವರ್ತಕರಾದ ವಸಂತ ಗಿಳಿಯಾರ್,
ಬೈಂದೂರು ತಾಲೂಕು ರೈತ ಸಂಘದ ಅಧ್ಯಕ್ಷರಾದ ದೀಪಕ್ ಕುಮಾರ್ ಶೆಟ್ಟಿ, ಜಿ.ಪಂ. ಮಾಜಿ ಅಧ್ಯಕ್ಷ ರಾಜು ಪೂಜಾರಿ ಶುಭ ಹಾರೈಸಿದರು.
ಶಿಕ್ಷಣ ಸಲಹೆಗಾರರಾದ ಚಿತ್ರಾ ಕಾರಂತ್, ಪ್ರೌಢ ಶಾಲಾ ಮುಖ್ಯ ಶಿಕ್ಷಕ ಜಗದೀಶ ಶೆಟ್ಟಿ, ರಾಜಾರಾಮ ಗುರುಜಿ ಯಡಮೊಗೆ
ಇಂಗ್ಲೀಷ್ ಮೀಡಿಯಂ ವಿಭಾಗದ ಮುಖ್ಯ ಶಿಕ್ಷಕಿ ದೀಪಿಕಾ ಆಚಾರ್ ಉಪಸ್ಥಿತರಿದ್ದರು.
ಉಪಪ್ರಾಂಶುಪಾಲ ರಮೇಶ್ ಪೂಜಾರಿ ಸ್ವಾಗತಿಸಿದರು.
ಉದಯ ನಾಯ್ಕ್ ನಿರೂಪಿಸಿದರು.


ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳು ಉಡುಪಿ ಜಿಲ್ಲೆಯ ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಸಾಮೂಹಿಕ ನೃತ್ಯ ಸ್ಪರ್ಧೆ, ಚಿತ್ರ ಕಲಾ ಸ್ಪರ್ಧೆ, ರಸಪ್ರಶ್ನೆ ಸ್ಪರ್ಧೆ, ವಿಜ್ಞಾನ ಮೇಳ, ಕಿರು ಪ್ರಹಸನ ಸ್ಪರ್ಧೆ ನಡೆಯಿತು.
ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಪ್ರತಿಷ್ಠಿತ ಕಲಾತಂಡಗಳಿಂದ ಹೋಳಿ ಕುಣಿತ, ಹೌಂದೇರಾಯನ ವಾಲಗ, ಹುಲಿ ಹೆಜ್ಜೆ, ವಿವಿಧ ನೃತ್ಯ ತಂಡಗಳಿಂದ ನೃತ್ಯ ಪ್ರದರ್ಶನ, ಅಂತರಾಷ್ಟ್ರೀಯ ಖ್ಯಾತಿಯ ಜಾದೂಗಾರ ಸತೀಶ್ ಹೆಮ್ಮಾಡಿ ತಂಡದವರಿಂದ ಜಾದೂ ವಿಸ್ಮಯ ನಡೆಯಿತು .

ವಿದ್ಯಾರ್ಥಿಗಳಲ್ಲಿ ವ್ಯವಹಾರ ಜ್ಞಾನವನ್ನು ಬೆಳೆಸುವ ಉದ್ದೇಶದಿಂದ ಈ ಕಾರ್ಯಕ್ರಮ ಹಮ್ಮಿಕೊಂಡಿದ್ದು ವಿದ್ಯಾರ್ಥಿಗಳು ಸುಮಾರು ೧೫೦ಕ್ಕೂ ಹೆಚ್ಚು ಮಳಿಗೆಗಳನ್ನು ತೆರೆದು ವಿದ್ಯಾರ್ಥಿಗಳೇ ವ್ಯವಹಾರ ಮಾಡುವುದರ ಮೂಲಕ ಶೈಕ್ಷಣಿಕ ಸಂಚಲನ ಮೂಡಿಸಿದರು.

administrator

Related Articles

Leave a Reply

Your email address will not be published. Required fields are marked *

You cannot copy content of this page