udupimitra.in
  • November 23, 2026
  • Last Update November 22, 2026 5:59 pm
  • Brahmavara

ಡಿಸೆಂಬರ್ 6ರಂದು ಸುಜ್ಞಾನ ಪಿಯು ಕಾಲೇಜಿನಲ್ಲಿ ರಾಜ್ಯ ಮಟ್ಟದ ವಿದ್ಯಾರ್ಥಿವೇತನ ಪರೀಕ್ಷೆ

ಡಿಸೆಂಬರ್ 6ರಂದು ಸುಜ್ಞಾನ ಪಿಯು ಕಾಲೇಜಿನಲ್ಲಿ ರಾಜ್ಯ ಮಟ್ಟದ ವಿದ್ಯಾರ್ಥಿವೇತನ ಪರೀಕ್ಷೆ

ವರದಿ : ಚಿತ್ತೂರು ಪ್ರಭಾಕರ ಆಚಾರ್ಯ
ಉಡುಪಿಮಿತ್ರ ಪತ್ರಿಕೆ ಸುದ್ಧಿ :
ಕುಂದಾಪುರ: ಇಲ್ಲಿನ ಯಡಾಡಿ-ಮತ್ಯಾಡಿಯ ವಿದ್ಯಾರಣ್ಯ ಕ್ಯಾಂಪಸ್‌ನಲ್ಲಿರುವ ಸುಜ್ಞಾನ ಎಜುಕೇಶನಲ್ ಟ್ರಸ್ಟ್ (ರಿ.) ಪ್ರವರ್ತಿತ ಸುಜ್ಞಾನ ಪಿಯು ಕಾಲೇಜಿನ ವತಿಯಿಂದ ಪ್ರಸಕ್ತ ಸಾಲಿನ ಎಸ್‌ಎಸ್‌ಎಲ್‌ಸಿ (10ನೇ ತರಗತಿ) ವಿದ್ಯಾರ್ಥಿಗಳಿಗಾಗಿ ಡಿಸೆಂಬರ್ 6, ಭಾನುವಾರ ಬೆಳಿಗ್ಗೆ 10 ಗಂಟೆಗೆ ಬೃಹತ್ ವಿದ್ಯಾರ್ಥಿವೇತನ ಪರೀಕ್ಷೆಯನ್ನು ಆಯೋಜಿಸಲಾಗಿದೆ.
ರಾಜ್ಯ ಪಠ್ಯಕ್ರಮ (ಕನ್ನಡ ಮತ್ತು ಆಂಗ್ಲ ಮಾಧ್ಯಮ), ಸಿಬಿಎಸ್‌ಇ ಹಾಗೂ ಐಸಿಎಸ್‌ಇ ಪಠ್ಯಕ್ರಮದಲ್ಲಿ ವ್ಯಾಸಂಗ ಮಾಡುತ್ತಿರುವ ಎಲ್ಲಾ ವಿದ್ಯಾರ್ಥಿಗಳು ಈ ಪರೀಕ್ಷೆಯಲ್ಲಿ ಪಾಲ್ಗೊಳ್ಳಬಹುದು. ಆಯಾ ಪಠ್ಯಕ್ರಮಕ್ಕೆ ಅನುಗುಣವಾಗಿ ಗಣಿತ, ವಿಜ್ಞಾನ, ಇಂಗ್ಲಿಷ್ ಹಾಗೂ ಸಮಾಜ ವಿಜ್ಞಾನ ವಿಷಯಗಳಲ್ಲಿ ಒಟ್ಟು ೧೦೦ ಅಂಕಗಳಿಗೆ ಪರೀಕ್ಷೆ ನಡೆಯಲಿದೆ. ಪರೀಕ್ಷೆಯಲ್ಲಿ ಗಳಿಸುವ ಅಂಕಗಳ ಆಧಾರದ ಮೇಲೆ ಅರ್ಹ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪಿಯುಸಿ ಶಿಕ್ಷಣ ಶುಲ್ಕದಲ್ಲಿ ಶೇ.100, ಶೇ.75, ಶೇ.50 ಹಾಗೂ ಶೇ.25ರಷ್ಟು ವಿದ್ಯಾರ್ಥಿವೇತನ ನೀಡಲಾಗುವುದು. ಕಳೆದ ವರ್ಷ ಸಂಸ್ಥೆಯಿಂದ ಸುಮಾರು ರೂ.೫ ಕೋಟಿ ಮೌಲ್ಯದ ವಿದ್ಯಾರ್ಥಿವೇತನ ವಿತರಿಸಲಾಗಿದ್ದು, ಈ ಬಾರಿ ಇನ್ನೂ ಹೆಚ್ಚಿನ ವಿದ್ಯಾರ್ಥಿಗಳಿಗೆ ನೆರವಾಗುವ ಗುರಿ ಹೊಂದಲಾಗಿದೆ ಎಂದು sಸುಜ್ಞಾನ ಎಜುಕೇಶನ್ ಟ್ರಸ್ಟ್ ಅಧ್ಯಕ್ಷ ಡಾ. ರಮೇಶ್ ಶೆಟ್ಟಿ ತಿಳಿಸಿದರು. ಅವರು ನ.೨೨ರಂದು ವಿದ್ಯಾರಣ್ಯ ಸಂಸ್ಥೆಯಲ್ಲಿ ನಡೆಸಿದ ಪತ್ರಿಕಾಗೋಷ್ಟಿಯಲ್ಲಿ ಮಾಹಿತಿ ನೀಡಿದರು.


ಸಂಸ್ಥೆಯ ಸಾಧನೆ ಹಾಗೂ ವಿಶೇಷತೆಗಳು :
ಟ್ರಸ್ಟಿನ ಖಜಾಂಚಿ ಭರತ್ ಶೆಟ್ಟಿ ಮಾತನಾಡಿ ಕಳೆದ ಐದು ವರ್ಷಗಳಿಂದ ಡಾ. ರಮೇಶ್ ಶೆಟ್ಟಿ ಅವರ ನೇತೃತ್ವದಲ್ಲಿ ಕಾರ್ಯನಿರ್ವಹಿಸುತ್ತಿರುವ ಸುಜ್ಞಾನ ಸಂಸ್ಥೆಯು, ಪಿಯು ಬೋರ್ಡ್ ಪರೀಕ್ಷೆಯ ಜೊತೆಗೆ ಸಿಇಟಿ, ನೀಟ್, ಜೆಇಇ, ಸಿಎ ಮತ್ತು ಸಿಎಸ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಗುಣಮಟ್ಟದ ತರಬೇತಿ ನೀಡುತ್ತಿದೆ. ೨೦೨೫-೨೬ನೇ ಸಾಲಿನ ನೀಟ್ ಪರೀಕ್ಷೆಯಲ್ಲಿ ಸಂಸ್ಥೆಯ ವಿದ್ಯಾರ್ಥಿ ಸಮ್ಮೇದ್ ಪ್ಯಾರಿಸ್ ಅಖಿಲ ಭಾರತ ಮಟ್ಟದಲ್ಲಿ 2135ನೇ ರ‍್ಯಾಂಕ್ (ವಿಭಾಗವಾರು) ಗಳಿಸಿ ಕುಂದಾಪುರ, ಬ್ರಹ್ಮಾವರ, ಬೈಂದೂರು ಮತ್ತು ಹೆಬ್ರಿ ತಾಲೂಕುಗಳಿಗೆ ಪ್ರಥಮ ಸ್ಥಾನ ಪಡೆದಿದ್ದಾರೆ. ಅಲ್ಲದೆ ಧನುಷ್ ದೇವಾಡಿಗ, ಜೈರಾಜ್, ರುಮೇಜ್ ಶೇಖ್, ಇಂಚರಾ, ಅಲಿಜಾ ಕರಾಮತುಲ್ಲಾ, ಅರ್ಜುನ್ ಜಿ. ಶೆಟ್ಟಿ ಸೇರಿದಂತೆ ಹಲವರು ಸರ್ಕಾರಿ ಕೋಟಾದಡಿ ಎಂಬಿಬಿಎಸ್ ಪ್ರವೇಶ ಪಡೆದು ಸಾಧನೆ ಮಾಡಿದ್ದಾರೆ. ೧೫ ಎಕರೆ ವಿಶಾಲ ಹಸಿರು ಕ್ಯಾಂಪಸ್‌ನಲ್ಲಿ ಸುಸಜ್ಜಿತ ವಸತಿ ನಿಲಯವಿದ್ದು, ವಿದ್ಯಾರ್ಥಿಗಳ ಶೈಕ್ಷಣಿಕ ಸಂದೇಹಗಳನ್ನು ತಕ್ಷಣವೇ ಪರಿಹರಿಸಲು 24 X7 ರೆಸಿಡೆನ್ಷಿಯಲ್ ಶಿಕ್ಷಕರ ವ್ಯವಸ್ಥೆ ಇರುವುದು ಸಂಸ್ಥೆಯ ವಿಶೇಷತೆಯಾಗಿದೆ. ವಿದ್ಯಾರ್ಥಿಗಳಿಗೆ ಅಧ್ಯಯನದ ಸಂದರ್ಭದಲ್ಲಿ ಯಾವುದೇ ವಿಷಯದಲ್ಲಿ ಸಂಶಯಗಳು ಎದುರಾದರೆ ತಕ್ಷಣವೇ ಪರಿಹರಿಸಿಕೊಳ್ಳಲು ಅನುಕೂಲವಾಗುವಂತೆ ಶಿಕ್ಷಕರು ವಸತಿ ನಿಲಯದಲ್ಲಿಯೇ ವಾಸ್ತವ್ಯವಿದ್ದು ಮಾರ್ಗದರ್ಶನ ನೀಡುತ್ತಾರೆ. ಇಂತಹ ಸಂಸ್ಥೆಯಲ್ಲಿ ಪ್ರಸ್ತುತ ಸಾಲಿನಲ್ಲಿ ಎಸ್‌ಎಸ್‌ಎಲ್‌ಸಿ ವ್ಯಾಸಂಗ ಮಾಡುತ್ತಿರುವ ಎಲ್ಲಾ ವಿದ್ಯಾರ್ಥಿಗಳಿಗೆ ಡಿ.೬ರಂದು ವಿದ್ಯಾರ್ಥಿವೇತನ ಪರೀಕ್ಷೆಯನ್ನು ಆಯೋಜಿಸಲಾಗಿದೆ. ವಿದ್ಯಾರ್ಥಿಗಳು ಹಾಗೂ ಪೋಷಕರು ಈ ಸುವರ್ಣಾವಕಾಶವನ್ನು ಸದ್ಬಳಕೆ ಮಾಡಿಕೊಂಡು ಹೆಚ್ಚಿನ ಸಂಖ್ಯೆಯಲ್ಲಿ ನೋಂದಾಯಿಸಿಕೊಂಡು, ಡಿಸೆಂಬರ್ 6ರಂದು ಯಡಾಡಿ-ಮತ್ಯಾಡಿಯ ವಿದ್ಯಾರಣ್ಯ ಕ್ಯಾಂಪಸ್‌ನ ಸುಜ್ಞಾನ ಪಿಯು ಕಾಲೇಜಿನಲ್ಲಿ ನಡೆಯಲಿರುವ ವಿದ್ಯಾರ್ಥಿವೇತನ ಪರೀಕ್ಷೆಯಲ್ಲಿ ಭಾಗವಹಿಸುವಂತೆ ಕೋರಿಕೊಂಡರು.


ಪರೀಕ್ಷೆಗೆ ಹಾಜರಾಗುವವರಿಗೆ ಸೂಚನೆ:
ಪ್ರಸಕ್ತ ಸಾಲಿನಲ್ಲಿ ಎಸ್‌ಎಸ್‌ಎಲ್‌ಸಿ ವ್ಯಾಸಂಗ ಮಾಡುತ್ತಿರುವ ಕನ್ನಡ ಮತ್ತು ಇಂಗ್ಲಿಷ್ ಮಾಧ್ಯಮದ ವಿದ್ಯಾರ್ಥಿಗಳು ಹಾಗೂ ಅಃSಇ/IಅSಇ ಪಠ್ಯಕ್ರಮದ ವಿದ್ಯಾರ್ಥಿಗಳು ಈ ಪರೀಕ್ಷೆ ಬರೆಯಬಹುದು. ಆಯಾಯ ಪಠ್ಯಕ್ರಮಕ್ಕೆ ಅನುಗುಣವಾಗಿ ೧೦೦ ಅಂಕಕ್ಕೆ ಪರೀಕ್ಷೆ ನಡೆಯಲಿದ್ದು,ಪರೀಕ್ಷೆಯು ಗಣಿತ, ವಿಜ್ಞಾನ ಹಾಗೂ ಇಂಗ್ಲಿಷ್,ಸಮಾಜ ವಿಜ್ಞಾನ ವಿಷಯಗಳನ್ನು ಒಳಗೊಂಡಿರುತ್ತದೆ. ಪರೀಕ್ಷೆಗೆ ಬರುವಾಗ ವಿದ್ಯಾರ್ಥಿಗಳು ತಮ್ಮ ಆಧಾರ್ ಕಾರ್ಡ್, ಪೆನ್ನು, ಪೆನ್ಸಿಲ್ ತರುವುದು ಕಡ್ಡಾಯವಾಗಿದೆ ಎಂದು ಅವರು ತಿಳಿಸಿದ್ದಾರೆ. ನೋಂದಣಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ
6366976744, 9964291755, 8217527362. ಮೊಬೈಲ್ ಸಂಖ್ಯೆಗಳನ್ನು ಸಂಪರ್ಕಿಸುವಂತೆ ಕೋರಿಕೊಂಡಿದ್ದಾರೆ.

administrator

Related Articles

Leave a Reply

Your email address will not be published. Required fields are marked *

You cannot copy content of this page