ಉಡುಪಿಮಿತ್ರ ಪತ್ರಿಕೆ ಸುದ್ಧಿ: ಕುಂದಾಪುರ,ಜು.೦೮: ಇನ್‌ಸ್ಟಿಟ್ಯೂಟ್ ಆಫ್ ಕಾಸ್ಟ್ ಅಕೌಂಟೆಂಟ್ಸ್ ಆಫ್ ಇಂಡಿಯಾ ನಡೆಸುವ ಸಿಎಮ್‌ಎ ಫೌಂಡೇಶನ್ ಪರೀಕ್ಷೆಯಲ್ಲಿ ಡಾ| ಬಿ ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ಉತ್ಕೃಷ್ಟ್ಟ ಸಾಧನೆಗೈದಿದ್ದಾರೆ.
ಸಿಂಚನಾ ಹಾಗೂ ಅರ್ಚನಾ ಇವರು ಸಿಎಮ್‌ಎ ಫೌಂಡೇಶನ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ.
ಡಾ| ಬಿ ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಹಾಗೂ ವೀ-ರೀಚ್ ಸಂಸ್ಥೆಯ ಪಠ್ಯ-ಪ್ರವಚನ, ಮಧ್ಯಂತರ ಮಾದರಿ ಪರೀಕ್ಷೆ, ಹಾಗೂ ನುರಿತ ತರಬೇತುದಾರರಿಂದ ತರಬೇತಿ, ಸಲಹೆ ಮತ್ತು ಮಾರ್ಗದರ್ಶನ ಪಡೆದು ವಿದ್ಯಾರ್ಥಿಗಳು ಈ ಸಾಧನೆಗೈದಿದ್ದಾರೆ.
ಸಾಧಕ ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ-ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.




